ದೇಶ

ಅಮೃತಸರ ಪೂರ್ವ ಕ್ಷೇತ್ರದಿಂದ ಸಿಧು ನಾಮಪತ್ರ

ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ...

ಅಮೃತಸರ ಪೂರ್ವ ಕ್ಷೇತ್ರದಿಂದ ಸಿಧು ನಾಮಪತ್ರ
ನವಜೋತ್ ಸಿಂಗ್ ಸಿಧು
Published On :
ಚಂಡಿಗಢ: ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಫೆಬ್ರವರಿ 4ರಂದು ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಅವರು ಲಂಬಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.
ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಲಂಬಿಯಲ್ಲಿ ಶಿರೋಮಣಿ ಅಕಾಲಿ ದಳದಿಂದ ಸ್ಪರ್ಧಿಸಿರುವ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ವಿರುದ್ಧ ಕಣಕ್ಕಿಳಿದಿದ್ದು, ಜಿದ್ದಾ ಜಿದ್ದಿಗೆ ಕಾರಣವಾಗಿದೆ.
ಈ ಇಬ್ಬರು ಅಭ್ಯರ್ಥಿಗಳ ಹೊರತಾಗಿ ಆಪ್ ನಾಯಕ ಭಗ್ವಂತ್ ಮಾನ್ ಅವರು ಸಹ ಇಂದು ಜಲಲಬಾದ್ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.