ಮೊಬೈಲ್ ಕೊಡಿಸಲು ನಿರಾಕರಿಸಿದ ಅಜ್ಜಿ: ಮೊಮ್ಮಗ ಆತ್ಮಹತ್ಯೆ
ಹೊಸ ಮೊಬೈಲ್ ಫೋನ್ ಕೊಡಿಸಲು ಅಜ್ಜಿ ನಿರಾಕರಿಸಿದ ಕಾರಣ ಮನನೊಂದ 14 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ...

ಹೈದರಾಬಾದ್: ಹೊಸ ಮೊಬೈಲ್ ಫೋನ್ ಕೊಡಿಸಲು ಅಜ್ಜಿ ನಿರಾಕರಿಸಿದ ಕಾರಣ ಮನನೊಂದ 14 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಜಗತಿಯಲ್ ಜಿಲ್ಲೆಯ ಇಟಕಿಯಾಳ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಬಾಲಕ. ಶಾಲೆಯಲ್ಲಿ ತನ್ನ ಸಹಪಾಠಿಗಳು ಮೊಬೈಲ್ ಖರೀದಿಸಿದ್ದು, ತನಗೂ ಟಚ್ ಸ್ಕ್ರೀನ್ ಮೊಬೈಲ್ ಕೊಡಿಸುವಂತೆ ತನ್ನ ಅಜ್ಜಿಗೆ ಒತ್ತಾಯ ಮಾಡಿದ್ದಾನೆ. ಆದರೆ ಇದಕ್ಕೆ ನಿರಾಕರಿಸಿದ ಆತನ ಅಜ್ಜಿ, ಇಷ್ಟು ಚಿಕ್ಕ ವಯಸ್ಸಿಗೆ ಮೊಬೈಲ್ ಬೇಡ. ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡುವಂತೆ ಬುದ್ದಿ ಮಾತು ಹೇಳಿದ್ದಾರೆ.
ಇದರಿಂದ ಬೇಸರಗೊಂಡ ಆತ ಶಾಲೆಗೆ ತೆರಳಿ, ಶಾಲೆಯ ಪಕ್ಕದಲ್ಲಿದ್ದ ಮರದ ಕೊಂಬೆಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವನ್ನು ನೋಡಿದ ಬಾಲಕನ ಸ್ನೇಹಿತರು ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಬಾಲಕನ ತಂದೆ ಕುಟುಂಬವನ್ನು ಬಿಟ್ಟು ಹೋಗಿದ್ದು, ಬಾಲಕ ಅಜ್ಜಿಯ ಆಶ್ರಯದಲ್ಲಿ ಬೆಳೆಯುತ್ತಿದ್ದನು ಎಂದು ಸ್ಥಳೀಯರು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


