ವಾರಣಾಸಿ ಪೋಸ್ಟರ್ಗಳಲ್ಲಿ ಕೃಷ್ಣಾರ್ಜುನರಾಗಿ ರಾಹುಲ್, ಅಖಿಲೇಶ್ ಪ್ರತ್ಯಕ್ಷ!
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಆಡಳಿತರೂಢ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಒಲವು...

Published On :
ವಾರಣಾಸಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಆಡಳಿತರೂಢ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಒಲವು ತೋರಿರುವ ಬೆನ್ನಲ್ಲೇ ವಾರಣಾಸಿಯ ಹಲವು ಕಡೆ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕೃಷ್ಣಾರ್ಜುನರಾಗಿ ರಥದಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ಗಳ ರಾರಾಜಿಸುತ್ತಿದೆ.
ಪೋಸ್ಟರ್ಗಳಲ್ಲಿ ಕೃಷ್ಣನಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅರ್ಜುನನಾಗಿ ಎಸ್ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಬಿಂಬಿಸಲಾಗಿದ್ದು, ಕಾಂಗ್ರೆಸ್ ಮತ್ತು ಎಸ್ಪಿ ನಡುವಿನ ಮೈತ್ರಿ ಬಹುತೇಕ ಖಚಿತ ಎನ್ನಲಾಗಿದೆ. ಪೋಸ್ಟರ್ನಲ್ಲಿ ಎಸ್ಪಿ ಚಿಹ್ನೆ ಸೈಕಲ್ ಬಳಸಲಾಗಿದೆ. ವಿಕಾಸ ಮತ್ತು ವಿಜಯದ ಹಾದಿಯಲ್ಲಿ ಇಬ್ಬರು ಮಹಾರಥಿಗಳು ಮುನ್ನುಗ್ಗುತ್ತಿದ್ದಾರೆ ಎಂಬ ಘೊಷವಾಕ್ಯವನ್ನು ಬಳಸಲಾಗಿದೆ.
ಈಗಾಗಲೇ ಕಾಂಗ್ರೆಸ್ ಮುಖ್ಯಮಂತ್ರಿಯಾಗಬೇಕಿದ್ದ ಮಾಜಿ ಸಿಎಂ ಶೀಲಾ ದೀಕ್ಷಿತ್ ಸಂಪೂರ್ಣವಾಗಿ ಅಖಿಲೇಶ್ಗೆ ಸಹಮತ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ತಂದೆ ಮುಲಾಯಂ ಸಿಂಗ್ ಯಾದವ್ ಮತ್ತು ಚಿಕ್ಕಪ್ಪ ಶಿವಪಾಲ್ ಯಾದವ್ ವಿರುದ್ಧ ಸೈಕಲ್ ಚಿಹ್ನೆಗಾಗಿ ಪೈಪೋಟಿ ನಡೆಸಿ ಗೆದ್ದಿದ್ದ ಅಖಿಲೇಶ್ ಕಾಂಗ್ರೆಸ್ ಜತೆಗೆ ಮೈತ್ರಿ ಸಾಧಿಸುವತ್ತ ಹೆಜ್ಜೆ ಇರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


