ಶಾಲಾ ಬಸ್ ದುರ್ಘಟನೆ: ಇಟಾ ಶಿಕ್ಷಣ ಇಲಾಖೆಯ 2 ಅಧಿಕಾರಿಗಳು ಅಮಾನತು
ಉತ್ತರಪ್ರದೇಶ ಇಟಾ ಜಿಲ್ಲೆಯಲ್ಲಿ ನಿನ್ನೆಯಷ್ಟೇ ನಡೆದ ಶಾಲಾ ಬಸ್ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಟಾ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು...

ಇಟಾ (ಉತ್ತರಪ್ರದೇಶ): ಉತ್ತರಪ್ರದೇಶ ಇಟಾ ಜಿಲ್ಲೆಯಲ್ಲಿ ನಿನ್ನೆಯಷ್ಟೇ ನಡೆದ ಶಾಲಾ ಬಸ್ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಟಾ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ.
ಜಿಲ್ಲಾ ಆಡಳಿತ ಆದೇಶ ನೀಡಿದ್ದರು ಶಾಲೆಯನ್ನು ಅಕ್ರಮವಾಗಿ ತೆರೆಯಲಾಗಿತ್ತು. ನಿನ್ನೆ ನಡೆದ ದುರ್ಘಟನೆ ಬಳಿಕ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಅಲ್ಲದೆ, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಪೊಲೀಸ್ ಅಧಿಕಾರಿ ದಲಿಜೀತ್ ಸಿಂಗ್ ಚೌಧರಿಯವರು ಹೇಳಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಶಾಲಾ ಆಡಳಿತ ಹಾಗೂ ಬಸ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಅಲ್ಲದೆ, ಅಧಿಕಾರಿಗಳು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದರು.
ನಿನ್ನೆಯಷ್ಟೇ ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ ಶಾಲಾ ಬಸ್ ಹಾಗೂ ಲಾರಿ ಎರಡು ಮುಖಾಮುಖಿ ಡಿಕ್ಕಿಹೊಡೆದಿದ್ದವು. ಘಟನೆಯಲ್ಲಿ ಬಸ್ ನಲ್ಲಿ 15 ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟಿದ್ದರು. 40ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.
ದುರ್ಘಟನೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದರು. ಆಕಸ್ಮಿಕವಾಗಿ ಸಂಭವಿಸಿರುವ ಈ ಘಟನೆ ನೋವುಂಟು ಮಾಡಿದೆ. ಗಾಯಗೊಂಡಿರುವ ಮಕ್ಕಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದರು.
ಇದಲ್ಲದೆ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಘಟನೆ ಕುರಿತಂತೆ ಸಂತಾಪವನ್ನು ಸೂಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


