ದಲಿತ ಯುವಕನಿಗೆ ಥಳಿತ ಪ್ರಕರಣಕ್ಕೆ ಹೊಸ ತಿರುವು: ಮಗಳಿಗೆ ಕಿರುಕುಳ ನೀಡುತ್ತಿದ್ದನೆಂದು ತಾಯಿ ಆರೋಪ
ಗುಬ್ಬಿಯಲ್ಲಿ ನಡೆದಿದೆ ಎನ್ನಲಾದ ದಲಿತ ಯುವಕನ ಥಳಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಮಗಳಿಗೆ ಯುವಕ ಕಿರುಕುಳ ನೀಡಿದ್ದ ಎಂದು ಬಾಲಕಿಯ ತಾಯಿ...

ತುಮಕೂರು: ಗುಬ್ಬಿಯಲ್ಲಿ ನಡೆದಿದೆ ಎನ್ನಲಾದ ದಲಿತ ಯುವಕನ ಥಳಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಮಗಳಿಗೆ ಯುವಕ ಕಿರುಕುಳ ನೀಡಿದ್ದ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ.
ಮನೆಯಿಂದ ಶಾಲೆಗೆ ಹೋಗುತ್ತಿದ್ದ ವೇಳೆ ಅಭಿಷೇಕ್ ಮಗಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಿದ್ದ. ನಂತರ ಶಾಲೆಯಿಂದ ಮನೆಗೆ ಬಂದ ಕೂಡಲೇ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಳು. ಇದಾದ ಬಳಿಕ ಸಾಕಷ್ಟು ಬಾರಿ ಎಚ್ಚರಿಕೆಗಳನ್ನು ನೀಡಿದ್ದರೂ ಆತ ಪ್ರತೀನಿತ್ಯ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ.
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಜಿ.ಬಿ. ಮಂಜುನಾಥ್ ಅವರು, ಪ್ರಸ್ತುತ ಪ್ರಕರಣ ಸಂಬಂಧ ತನಿಖೆಗೆ ಪ್ರಗತಿಯಲ್ಲಿದ್ದು, ತನಿಖೆ ಪೂರ್ಣಗೊಳ್ಳುವವರೆಗೂ ಯುವಕನ ವಿರುದ್ಧ ಪೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಸಾಧ್ಯವಿಲ್ಲ. ಈವರೆಗೂ ಪ್ರಕರಣ ಸಂಬಂಧ ಬಾಲಕಿಯ ತಂದೆ ಸೇರಿ ಐವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ದಲಿತ ಯುವಕನೊಬ್ಬನನ್ನು ಅಪರಿಸಿದ್ದ ಗುಂಪೊಂದು ಗುಬ್ಬಿಯಲ್ಲಿರುವ ತೋಟದ ಮನೆಯಲ್ಲಿ ಆತನನ್ನು ಕೂಡಿ ಹಾಕಿ, ಬೆತ್ತಲೆಗೊಳಿಸಿ ಚಪ್ಪಲಿ ಹಾರವನ್ನು ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದರು. ಈ ಘಟನೆಯ ವಿಡಿಯೋ ವಾಟ್ಸ್ಆ್ಯಪ್ ಗಳಲ್ಲಿ ಹರಿದಾಡತೊಡಗಿತ್ತು. ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ದಲಿತ ಸಂಘಟನೆಗಳು ಪ್ರತಿಭಟನೆಗಿಳಿದಿದ್ದವು. ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


