ದೇಶ

ಯುವತಿ ಅಪಹರಣ: ಚಲಿಸುತ್ತಿದ್ದ ವಾಹನದಲ್ಲೇ ಐವರಿಂದ ಗ್ಯಾಂಗ್ ರೇಪ್

ಯುವತಿಯನ್ನು ಅಪಹರಿಸಿದ ಐವರು ಕಾಲೇಜು ವಿದ್ಯಾರ್ಥಿಗಳು ಚಲಿಸುತ್ತಿದ್ದ ವಾಹನದಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ...

ಯುವತಿ ಅಪಹರಣ: ಚಲಿಸುತ್ತಿದ್ದ ವಾಹನದಲ್ಲೇ ಐವರಿಂದ ಗ್ಯಾಂಗ್ ರೇಪ್
ಸಾಂದರ್ಭಿಕ ಚಿತ್ರ
Published On :

ಜೈಪುರ: ಯುವತಿಯನ್ನು ಅಪಹರಿಸಿದ ಐವರು ಕಾಲೇಜು ವಿದ್ಯಾರ್ಥಿಗಳು ಚಲಿಸುತ್ತಿದ್ದ ವಾಹನದಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ತಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.

ಪ್ರಥಮ ಬಿ.ಎ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಿದ ಯುವಕರು ಆಕೆಯ ಮೇಲೆ ಅತ್ಯಾಚಾರ ನಡೆಸಿ, ಘಟನೆಯನ್ನು ವಿಡಿಯೋ ಮಾಡಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಅರವಿಂದ್, ಹಿಮಾಂಶು, ಕುಲದೀಪ್ ಮತ್ತು ವಿಜೇಂದ್ರ ಎಂದು ಆರೋಪಿಗಳನ್ನು ಗುರುತಿಸಲಾಗಿದ್ದು, ಮತ್ತೊಬ್ಬ ಆರೋಪಿಯ ಗುರುತು ಪತ್ತೆಯಾಗಿಲ್ಲ, ಈ ಐವರು ವಿದ್ಯಾರ್ಥಿಗಳು ಜೀಪಿನಲ್ಲಿ ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್ ಮಾಡಿದ್ದಾರೆ.

ವಿಷಯವನ್ನು ಯಾರಿಗಾದರೂ ತಿಳಿಸಿದರೇ ವಿಡಿಯೋವನ್ನು ಇಂಟರ್ನೆಟ್ ನಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿ ಆಕೆಯನ್ನು ಅಪಹರಿಸಿದ ಸ್ಥಳಕ್ಕೆ ವಾಪಸ್ ಬಿಟ್ಟು ಹೋಗಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿಜಯೇಂದ್ರ  ಮತ್ತು ಆತನ ಜೀಪನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.