ದೇಶ

ಜಲ್ಲಿಕಟ್ಟು: ಮಾಂಬ್ಲಮ್ ರೈಲು ನಿಲ್ದಾಣದಲ್ಲಿ ಡಿಎಂಕೆ ಮುಖಂಡ ಸ್ಟಾಲಿನ್ ಬಂಧನ

ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಬಂದ್ ವೇಳೆ ರೈಲ್ ರೋಕೋ ಚಳುವಳಿ ನಡೆಸುತ್ತಿರುವ ಡಿಎಂಕೆ ಮುಖಂಡ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಲ್ಲಿಕಟ್ಟು: ಮಾಂಬ್ಲಮ್ ರೈಲು ನಿಲ್ದಾಣದಲ್ಲಿ ಡಿಎಂಕೆ ಮುಖಂಡ ಸ್ಟಾಲಿನ್ ಬಂಧನ
ರೈಲ್ ರೋಕೋ ಚಳುವಳಿ ನಡೆಸುತ್ತಿರುವ ಡಿಎಂಕೆ ಕಾರ್ಯಕರ್ತರು
Published On :

ಚೆನ್ನೈ: ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಬಂದ್ ವೇಳೆ ರೈಲ್ ರೋಕೋ ಚಳುವಳಿ ನಡೆಸುತ್ತಿರುವ ಡಿಎಂಕೆ ಮುಖಂಡ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈನ ಮಾಂಬ್ಲಮ್ ರೈಲು ನಿಲ್ದಾಣದಲ್ಲಿ ನೂರಾರು ಡಿಎಂಕೆ ಕಾರ್ಯಕರ್ತರೊಂದಿಗೆ ಸೇರಿ ಎಂಕೆ ಸ್ಟಾಲಿನ್ ರೈಲ್ ರೋಕೋ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ತಡೆಯಲೆತ್ತಿನಿಸಿದ್ದು,  ಆಕ್ರೋಶ ಭರಿತರಾಗಿದ್ದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ಮುರಿದು ರೈಲು ನಿಲ್ದಾಣದ ಒಳಗೆ ನುಗ್ಗಿದ್ದಾರೆ. ಬಳಿಕ ನಿಲ್ದಾಣದಲ್ಲಿದ್ದ ಪೀಠೋಪರಣಕರಣಗಳನ್ನು ಕಾರ್ಯಕರ್ತರು ಧ್ವಂಸ ಮಾಡಿದ್ದು, ಈ ವೇಳೆ ಮುಂಜಾಗ್ರತಾ  ಕ್ರಮವಾಗಿ ಮಾಂಬ್ಲಮ್ ರೈಲು ನಿಲ್ದಾಣ ಪೊಲೀಸರು ಎಂಕೆ ಸ್ಟಾಲಿನ್ ಅವರನ್ನು ಬಂಧಿಸಿದ್ದಾರೆ.

ಅಂತೆಯೇ ಜಲ್ಲಿಕಟ್ಟು ಆಚರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಇಂದು ಶಾಲಾ-ಕಾಲೇಜುಗಳು ಮುಚ್ಚಲ್ಪಟ್ಟಿವೆ. ಅಂತೆಯೇ ವಿವಿಧ  ತಮಿಳುನಾಡು ಬಂದ್ ಮಾಡಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿವೆ. ಬಂದ್ ಗೆ ಟ್ಯಾಕ್ಸಿ, ಆಟೋ ಮತ್ತು ಸಾರಿಗೆ ಒಕ್ಕೂಟಗಳ ಸಂಘ ಬೆಂಬಲ ನೀಡಿರುವುದರಿಂದ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.