ಅಖಿಲೇಶ್ ಯಾದವ್ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಶಿವಪಾಲ್ ಯಾದವ್
ಉತ್ತರ ಪ್ರದೇಶ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನೂತನ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶುಕ್ರವಾರ ವಿಧಾನಸಭೆ...

Published On :
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನೂತನ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶುಕ್ರವಾರ ವಿಧಾನಸಭೆ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಹಿತಶತ್ರು ಚಿಕ್ಕಪ್ಪ ಹಾಗೂ ವಿವಾದಾತ್ಮಕ ಸಚಿವ ಅಜಂ ಖಾನ್ ಅವರು ಸ್ಥಾನ ಪಡೆದಿದ್ದಾರೆ.
ಫೆಬ್ರವರಿ 11ರಿಂದ ನಡೆಯುವ ಮೊದಲ ಮೂರು ಹಂತದ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಪಕ್ಷ ಇಂದು 191 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಶಿವಪಾಲ್ ಯಾದವ್ ಅವರು ಜಸ್ವಂತ್ ನಗರದಿಂದ ಹಾಗೂ ಅಜಂ ಖಾನ್ ಅವರು ತಮ್ಮ ಸಾಂಪ್ರದಾಯಿಕ ರಾಂಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ರಾಜ್ಯಸಭಾ ಸದಸ್ಯ ಬೆನಿ ಪ್ರಸಾದ್ ವರ್ಮಾ ಅವರ ಪುತ್ರ ರಾಕೇಶ್ ವರ್ಮಾ ಸಹ ಅಖಿಲೇಶ್ ಯಾದವ್ ಅವರ ಮೊದಲ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ವರ್ಮಾ ಈ ಮುಂಚೆ ಶಿವಪಾಲ್ ಯಾದವ್ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದರು.
ಈ ಮುಂಚೆ ಮುಲಾಯಂ ಸಿಂಗ್ ಯಾದವ್ ಅವರು ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಕೈಬಿಡಲಾಗಿದ್ದ ಅಖಿಲೇಶ್ ಯಾದವ್ ಅವರ ಹಲವು ಬೆಂಬಲಿಗರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಮತ್ತೊಂದು ವಿಶೇಷ. ಇನ್ನು ಮೊದಲ ಪಟ್ಟಿಯಲ್ಲಿ ಶಿವಪಾಲ್ ಯಾದವ್ ಅವರಿಗೆ ಸ್ಥಾನ ನೀಡುವ ಮೂಲಕ ಅಖಿಲೇಶ್ ಯಾದವ್ ಅವರು ತಂದೆ-ಮಗ ಮತ್ತೆ ಒಂದಾಗುವ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Akhilesh Yadavಅಖಿಲೇಶ್ ಯಾದವ್First Listಮೊದಲ ಪಟ್ಟಿಉತ್ತರ ಪ್ರದೇಶ ಚುನಾವಣೆShivpal Yadavಶಿವಪಾಲ್ ಯಾದವ್UP Poll
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


