ದೇಶ

ಜಲ್ಲಿಕಟ್ಟು ತೀರ್ಪು ಒಂದು ವಾರ ಮುಂದೂಡಿದ ಸುಪ್ರೀಂ ಕೋರ್ಟ್

ಮಹತ್ವದ ಬೆಳೆವಣಿಗೆಯಲ್ಲಿ ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಪ್ರಕಟವನ್ನು ಸುಪ್ರೀ ಕೋರ್ಟ್ ಒಂದು ವಾರಗಳ ಕಾಲ ಮುಂದೂಡಿದೆ.

ಜಲ್ಲಿಕಟ್ಟು ತೀರ್ಪು ಒಂದು ವಾರ ಮುಂದೂಡಿದ ಸುಪ್ರೀಂ ಕೋರ್ಟ್
ಸಂಗ್ರಹ ಚಿತ್ರ
Published On :

ನವದೆಹಲಿ: ಮಹತ್ವದ ಬೆಳೆವಣಿಗೆಯಲ್ಲಿ ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಪ್ರಕಟವನ್ನು ಸುಪ್ರೀ ಕೋರ್ಟ್ ಒಂದು ವಾರಗಳ ಕಾಲ ಮುಂದೂಡಿದೆ.

ಜಲ್ಲಿಕಟ್ಟು ಕ್ರೀಡೆಗಾಗಿ ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ತಮಿಳು ಜನರನ್ನು ಸಂತೈಸಲು ಮುಂದಾಗಿರು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೊರೆ ಹೋಗಲು ನಿರ್ಧರಿಸಿತ್ತು. ಈ ಸಂಬಂಧ  ತಮಿಳುನಾಡು ಸರ್ಕಾರದೊಂದಿಗೆ ಸೇರಿ ಸುಗ್ರೀವಾಜ್ಞೆ ಕುರಿತಂತೆ ಸಿದ್ಧತೆ ನಡೆಸುತ್ತಿರುವಾಗಲೇ ಸುಪ್ರೀಂ ಕೋರ್ಟ್ ತೀರ್ಪು ಹೊಳ ಬೀಳುವ ಸಾಧ್ಯತೆ ಇದ್ದರಿಂದ ಕೇಂದ್ರ ಸರ್ಕಾರ ತೀರ್ಪು ಮುಂದೂಡುವಂತೆ ಸುಪ್ರೀಂ ಕೋರ್ಟ್  ಗೆ ಮನವಿ ಮಾಡಿದೆ.

ಕೇಂದ್ರ ಸರ್ಕಾರದ ಮನವಿಗೆ ಸ್ಪಂದಿಸಿರುವ ಸುಪ್ರೀಂ ಕೋರ್ಟ್ ತೀರ್ಪ ಪ್ರಕಟಣೆಯನ್ನು ಒಂದು ವಾರಗಳ ಮುಂದೂಡಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರದ ಪರ ಎಜಿ ಮುಕುಲ್ ರೋಹ್ಚಗಿ ಅವರು ಸುಪ್ರೀಂ  ಕೋರ್ಟ್ ನಲ್ಲಿ ತೀರ್ಪು ಮುಂದೂಡುವಂತೆ ಮನವಿ ಸಲ್ಲಿಸಿದ್ದು, ಜಲ್ಲಿಕಟ್ಟು ಕ್ರೀಡೆ ಕುರಿತಂತೆ ತಮಿಳುನಾಡು ಜನತೆ ಭಾವನಾತ್ಮಕ ಸಂಬಂಧ ಹೊಂದಿದ್ದು, ಈ ನಿಟ್ಟಿನಲ್ಲಿ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರಗಳು ಪ್ರಯತ್ನ ನಡೆಸುತ್ತಿವೆ. ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದರೆ, ಈ ಬೆಳವಣಿಗೆಗಳಿಗೆ ಹೊಡೆತ ಬೀಳಲಿದೆ. ಹೀಗಾಗಿ ತೀರ್ಪನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಮನ್ನಿಸಿ, ತೀರ್ಪು ಪ್ರಕಟವನ್ನು ಒಂದು ವಾರಗಳ ಮುಂದೂಡಿದೆ.

ಇಂದು ಬೆಳಗ್ಗೆಯಷ್ಟೇ ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಅವರು ಜಲ್ಲಿಕಟ್ಟು ಆಚರಣೆಗಾಗಿ ಸುಗ್ರೀವಾಜ್ಞೆ ಹೊರಡಿಸುವುದಾಗಿ ಘೋಷಣೆ ಮಾಡಿದ್ದರು. ಸುಗ್ರೀವಾಜ್ಞೆ ಕರಡನ್ನು ಈಗಾಗಲೇ ಅನುಮೋದನೆಗಾಗಿ ಕಳುಹಿಸಲಾಗಿದ್ದು,  ಇನ್ನೆರಡು-ಮೂರು ಗಂಟೆಗಳಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.