ದುರಾದೃಷ್ಟವಶಾತ್ ಅಮೃತಸರ ಅನುಪಸ್ಥಿತಿಯ ಸಂಸದರನ್ನು ಕಂಡಿದೆ: ಅರುಣ್ ಜೇಟ್ಲಿ
ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ನವಜೋತ್ ಸಿಂಗ್ ಸಿಧು ವಿರುದ್ಧ ವಾಗ್ದಾಳಿ...

Published On :
ಅಮೃತಸರ: ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ನವಜೋತ್ ಸಿಂಗ್ ಸಿಧು ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಮೃತಸರ ನಗರ ಕಳೆದ ಹನ್ನೆರಡೂವರೆ ವರ್ಷಗಳಲ್ಲಿ ಸಂಸದರ ಅನುಪಸ್ಥಿತಿಯನ್ನು ಕಂಡಿತ್ತು ಎಂದು ಟೀಕಿಸಿದರು.
ಅಮೃತಸರ ನಗರ ಕಳೆದ ಹನ್ನೆರಡೂವರೆ ವರ್ಷಗಳ ಕಾಲ ಕ್ಷೇತ್ರದಲ್ಲಿ ಮತ್ತು ಸಂಸತ್ತಿನಲ್ಲಿ ಅನುಪಸ್ಥಿತಿಯ ಸಂಸದರನ್ನು ದುರಾದೃಷ್ಟವಶಾತ್ ಕಂಡಿದೆ. ಸಂಸದರಿಂದಲೇ ಅದು ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯದಿಂದ ಬಳಲಿತ್ತು ಎಂದು ಆಪಾದಿಸಿದರು.
ಈ ಬಾರಿ ನಮ್ಮ ಪಕ್ಷದ ಚುನಾಯಿತ ಪ್ರತಿನಿಧಿಗಳು ಕ್ಷೇತ್ರದ ಜನತೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಕುಂದುಕೊರತೆಗಳನ್ನು ಬಗೆಹರಿಸುತ್ತಾರೆ ಎಂದು ಭರವಸೆ ನೀಡುತ್ತೇನೆ. ಬಿಜೆಪಿ ಅಭ್ಯರ್ಥಿ ಗೆಲುವು ಪಡೆಯುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


