ಬಂಧಿತ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಆಸ್ಪತ್ರೆಗೆ ದಾಖಲು
ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ನ ಸಂಸದ ಸುದೀಪ್ ಬಂಡೋಪಾಧ್ಯಾಯ ಎಸ್ ಸಿಬಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published On :
ಭುವನೇಶ್ವರ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ನ ಸಂಸದ ಸುದೀಪ್ ಬಂಡೋಪಾಧ್ಯಾಯ ಎಸ್ ಸಿಬಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನ ಸಂಸದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅನಾರೋಗ್ಯ ಕಾಣಿಸಿಕೊಂಡ ಬೆನ್ನಲ್ಲೇ ಸುದೀಪ್ ಬಂಡೋಪಾಧ್ಯಾಯ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿನ ವೈದ್ಯರು ಬಂಡೋಪಾಧ್ಯಾಯ ಅವರನ್ನು ಎಸ್ ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಎಸ್ ಸಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶೇಷ ಜೈಲಿನಲ್ಲಿ ಇದ್ದ ಸುದೀಪ್ ಬಂಡೋಪಾಧ್ಯಾಯ ಅವರ ಆರೋಗ್ಯದಲ್ಲಿ ಈ ಹಿಂದೆಯೂ ವ್ಯತ್ಯಯ ಉಂಟಾಗಿದ್ದ ಹಿನ್ನೆಲೆಯಲ್ಲಿ ಜ.12 ರಿಂದ ಅವರನ್ನು ಮತ್ತೋರ್ವ ಬಂಧಿತ ಟಿಎಂಸಿ ಸಂಸದ ತಪಸ್ ಪಾಲ್ ಅವರೊಂದಿಗೆ ಜೈಲಿನ ಆಸ್ಪತ್ರೆಯಲ್ಲೇ ಇರಿಸಲಾಗಿತ್ತು.
ಜ.12 ರಂದು ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ಸುದೀಪ್ ಬಂಡೋಪಾಧ್ಯಾಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
TMCಆಸ್ಪತ್ರೆHospitalisedಟಿಎಂಸಿ ಸಂಸದರೋಸ್ ವ್ಯಾಲಿ ಚಿಟ್ ಫಂಡ್ ಹಗರಣಸುದೀಪ್ ಬಂಡೋಪಾಧ್ಯಾಯSudip BandopadhayaRose Valley chitfund scam
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


