ದೇಶ

ಭಾರತಕ್ಕೆ ಭೇಟಿ ನೀಡಲು ಅಮೆರಿಕಾ ನೂತನ ಉಪಾಧ್ಯಕ್ಷರಿಗೆ ಹಮೀದ್ ಅನ್ಸಾರಿ ಆಹ್ವಾನ

ಜ.20 ರಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದ ಉಪಾಧ್ಯಕ್ಷ ಮೈಕ್ ಪೆನ್ಸ್ ಗೆ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ.

ಭಾರತಕ್ಕೆ ಭೇಟಿ ನೀಡಲು ಅಮೆರಿಕಾ ನೂತನ ಉಪಾಧ್ಯಕ್ಷರಿಗೆ ಹಮೀದ್ ಅನ್ಸಾರಿ ಆಹ್ವಾನ
ಹಮೀದ್ ಅನ್ಸಾರಿ
Published On :
ನವದೆಹಲಿ: ಜ.20 ರಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದ ಉಪಾಧ್ಯಕ್ಷ ಮೈಕ್ ಪೆನ್ಸ್ ಗೆ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ. 
ದ್ವಿಪಕ್ಷೀಯ ಒಪ್ಪಂದಗಳನ್ನು ಉತ್ತೇಜಿಸುವುದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಭಾರತ ಭೇಟಿಗೆ ಉಪರಾಷ್ಟ್ರಪತಿಗಳು ಅಮೆರಿಕಾದ ನೂತನ ಉಪಾಧ್ಯಕ್ಷರಿಗೆ ಆಹ್ವಾನ ನೀಡಿದ್ದಾರೆ. " ನಿಮ್ಮ ನೇತೃತ್ವದ ನಾಯಕತ್ವದಲ್ಲಿ, ನಮ್ಮ ಬಾಂಧವ್ಯ ಹೊಸ ಎತ್ತರಕ್ಕೆ ಬೆಳೆಯಲಿದೆ ಎಂಬ ವಿಶ್ವಾಸವಿದೆ ಎಂದು ಅಭಿನಂದನಾ ಸಂದೇಶದಲ್ಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ತಿಳಿಸಿದ್ದಾರೆ. 
ಉಭಯ ರಾಷ್ಟ್ರಗಳ ಹಿತಾಸಕ್ತಿಗಾಗಿ ನಿಮ್ಮ ಜೊತೆಯಲ್ಲಿ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ ಹಾಗೂ ಸಾಧ್ಯವಾದಷ್ಟು ಶೀಘ್ರವೇ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸುತ್ತಿರುವುದಾಗಿ ಅನ್ಸಾರಿ ಅಮೆರಿಕಾದ ನೂತನ ಉಪಾಧ್ಯಕ್ಷರಿಗೆ ಕಳಿಸಿದ ಸಂದೇಶದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.