ನಮ್ಮ ವಿರುದ್ಧ ಕೈಜೋಡಿಸುವುದು ಎಸ್'ಪಿ, ಕಾಂಗ್ರೆಸ್'ಗೆ ಅಭ್ಯಾಸವಾಗಿ ಹೋಗಿದೆ: ಬಿಜೆಪಿ
ಉತ್ತರಪ್ರದೇಶದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಆರಂಭವಾಗುತ್ತಿದ್ದು, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ನಮ್ಮ ವಿರುದ್ಧ ಕೈಜೋಡಿಸುವುದು ಅಭ್ಯಾಸವಾಗಿ ಹೋಗಿದೆ...

ನವದೆಹಲಿ: ಉತ್ತರಪ್ರದೇಶದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಆರಂಭವಾಗುತ್ತಿದ್ದು, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ನಮ್ಮ ವಿರುದ್ಧ ಕೈಜೋಡಿಸುವುದು ಅಭ್ಯಾಸವಾಗಿ ಹೋಗಿದೆ ಎಂದು ಬಿಜೆಪಿ ಶನಿವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಬಿಜೆಪಿ ವಕ್ತಾರ ಸುಧಾನ್ಶು ತ್ರಿವೇದಿಯವರು, ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಮೈತ್ರಿಗಳೊಳ್ಳುತ್ತಿರುವುದು ಇದು ಮೊದಲೇನಲ್ಲ. ಬಿಜೆಪಿ ವಿರುದ್ಧ ಕೈ ಜೋಡಿಸುವುದು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಕ್ಕೆ ಚಟವಾಗಿ ಹೋಗಿದೆ. ಎರಡೂ ಪಕ್ಷಗಳು ಋಣಾತ್ಮಕ ವಿಚಾರಗಳಿಗಾಗಿ ಅಷ್ಟೇ ಕೈಜೋಡಿಸುತ್ತವೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಸಮಾಜವಾದಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿಗಳ್ಳುತ್ತಿರುವುದು ಆಂತರಿಕ ವಿಚಾರವಾಗಿದೆ. ಆದರೆ, ಉತ್ತರ ಪ್ರದೇಶದ ಜನತೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದ್ದು, ಸಮಾಜವಾದಿ, ಬಹುಜನ ಸಮಾಜವಾದಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಓಡಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


