ಬೇರೆ ಪಕ್ಷಗಳಿಂದ ಲಂಚ ಪಡೆಯುವ ಹೇಳಿಕೆ ಪುನರುಚ್ಛರಿಸಲು ಚು.ಆಯೋಗದ ಅನುಮತಿ ಕೇಳಿದ ಕೇಜ್ರಿವಾಲ್
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳಿಂದ ಲಂಚ ಪಡೆದು, ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಎಂಬ ಹೇಳಿಕೆಯನ್ನು ಪುನರುಚ್ಛರಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ಮನವಿ...

Published On :
ನವದೆಹಲಿ: ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳಿಂದ ಲಂಚ ಪಡೆದು, ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಎಂಬ ಹೇಳಿಕೆಯನ್ನು ಪುನರುಚ್ಛರಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.
ಗೋವಾ ಮತದಾರರು ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಹಣ ಪಡೆದುಕೊಂಡು ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿರುವ ಹೇಳಿಕೆಗೆ ಚುನಾವಣಾ ಆಯೋಗ ಛೀಮಾರಿ ಹಾಕಿತ್ತು. ಆದರೆ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಹೇಳಿಕೆಯ ವಿರುದ್ಧ ಚುನಾವಣಾ ಆಯೋಗದ ಆದೇಶ ಚುನಾವಣೆಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ಉತ್ತೇಜಿಸುತ್ತಿದೆ ಎಂದಿದ್ದು, ಈ ರೀತಿಯ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಬೇಕಾದರೆ ತಮ್ಮನ್ನು ರಾಯಭಾರಿಯನ್ನಾಗಿ ಮಾಡಬೇಕೆಂದು ಕೇಜ್ರಿವಾಲ್ ಹೇಳಿದ್ದಾರೆ.
ನನ್ನನ್ನು ತಡೆಯುವ ಮೂಲಕ ಚುನಾವಣಾ ಆಯೋಗ ಭ್ರಷ್ಟಾಚಾರವನ್ನು ತಡೆಯುತ್ತಿಲ್ಲ. ಬದಲಾಗಿ ಮತ್ತಷ್ಟು ಉತ್ತೇಜಿಸುತ್ತಿದೆ, ಚುನಾವಣಾ ಆಯೋಗ ಆದೇಶವನ್ನು ಮರುಪರಿಶೀಲನೆ ಮಾಡಿ ಅಂತಹದ್ದೇ ಹೇಳಿಕೆಗಳನ್ನು ನೀಡಲು ಅವಕಾಶ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


