ಛತ್ತೀಸ್ ಗಡದಲ್ಲಿ ರಕ್ಷಣಾ ಪಡೆಯೊಂದಿಗೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರ ಸಾವು
ಕ್ಷಣಾ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿರುವ ಘಟನೆ ಛತ್ತೀಸಗಡದ ಬಿಜಾಪುರ ಜಿಲ್ಲೆಯಲ್ಲಿ....

ರಾಯಪುರ: ರಕ್ಷಣಾ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿರುವ ಘಟನೆ ಛತ್ತೀಸಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಪದಮೆಟ್ಟಾ ಗ್ರಾಮದ ಬೆದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕಾಡಿನಲ್ಲಿ ಕಳೆದ ಸಂಜೆ ನಕ್ಸಲರು ಗುಂಡಿನ ಕಾಳಗ ಆರಂಭಿಸಿದ್ದಾರೆ. ನಂತರ ರಕ್ಷಣಾ ಪಡೆಯು ಪ್ರತಿದಾಳಿ ನಡೆಸಿದೆ ಎಂದು ಕಲ್ಲುರಿ ಪೊಲೀಸರು ತಿಳಿಸಿದ್ದಾರೆ.
ಪದಮೆಟ್ಟಾ ಕಾಡಿನಲ್ಲಿದ್ದ ಶಸ್ತ್ರ ಸಜ್ಜಿತ ನಕ್ಸಲರ ಗುಂಪು ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ರಕ್ಷಣಾ ಪಡೆ ಕೂಡ ಪ್ರತಿದಾಳಿ ನಡೆಸಿದೆ, ಕೂಡಲೇ ನಕ್ಸಲರು ಅಲ್ಲಿಂದ ಪರಾರಿಯಾಗಿದ್ದಾರೆ.
ಈ ವೇಳೆ ರಕ್ಷಣಾ ಪಡೆ ಪರಿಶೀಲನೆ ನಡೆಸಿದಾಗ ಇಬ್ಬರು ಪುರುಷರ ಮೃತ ದೇಹಗಳು ಪತ್ತೆಯಾಗಿವೆ. ಅವರ ಬಳಿ 303 ಸರ್ವೀಸ್ ಗನ್ ಹಾಗೂ 315 ರೈಫಲ್ ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


