ದೇಶ

ಎಸ್ಪಿ ಜೊತೆಗಿನ ಮೈತ್ರಿಯಲ್ಲಿ ನಿರ್ಣಾಯಕ ಪಾತ್ರ: ಸಕ್ರಿಯ ರಾಜಕೀಯಕ್ಕೆ ಪ್ರಿಯಾಂಕಾ ಎಂಟ್ರಿ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಪುತ್ರ ಪ್ರಿಯಾಂಕಾ...

ಎಸ್ಪಿ ಜೊತೆಗಿನ ಮೈತ್ರಿಯಲ್ಲಿ ನಿರ್ಣಾಯಕ ಪಾತ್ರ: ಸಕ್ರಿಯ ರಾಜಕೀಯಕ್ಕೆ ಪ್ರಿಯಾಂಕಾ ಎಂಟ್ರಿ
ಪ್ರಿಯಾಂಕಾ ಗಾಂಧಿ
Published On :

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಪುತ್ರಿ ಪ್ರಿಯಾಂಕಾ ಸಿದ್ಧರಾಗಿದ್ದಾರೆ.

ಸಮಾಜವಾದಿ ಪಕ್ಷದೊಂದಿಗಿನ ಚುನಾವಣಾ ಮೈತ್ರಿಯಲ್ಲಿ ಯಶಸ್ವಿ ಸಂಧಾನ ನಡೆಸಿ ಸೀಟು ಹಂಚಿಕೆ ವಿವಾದವನ್ನು ಬಗೆಹರಿಸುವ ಮೂಲಕ, ಪ್ರಿಯಾಂಕಾ ಅವರ ಔಪಚಾರಿಕ ರಾಜಕೀಯ ಪ್ರವೇಶದ ಬಗ್ಗೆ ಈ ವರೆಗೂ ಇದ್ದ ಊಹಾಪೋಹಾಗಳಿಗೆ ಇದರೊಂದಿಗೆ ತೆರೆ ಬಿದ್ದಂತಾಗಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್‌ ಯಾದವ್‌ ಅವರೊಂದಿಗೆ ಸೀಟು ಹಂಚಿಕೆ ವಿವಾದವನ್ನು ಯಶಸ್ವಿಯಾಗಿ ಬಗೆಹರಿಸುವಲ್ಲಿ ನಿರ್ಣಾಯಕ ಪಾತ್ರವಹಿಸಿದ ಪ್ರಿಯಾಂಕಾ ಗಾಂಧಿ ಅವರ ಸಂಧಾನ ಯತ್ನಗಳ ಬಗ್ಗೆ ಕಾಂಗ್ರೆಸ್‌ ನಾಯಕರು ತೃಪ್ತಿ ವ್ಯಕ್ತಪಡಿಸಿದ್ದಾರೆ.

ಹಿರಿಯ ಕಾಂಗ್ರೆಸ್‌ ನಾಯಕರಾಗಿರುವ ಆಹ್ಮದ್‌ ಪಟೇಲ್‌ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್‌ ಚುನಾವಣಾ ಹೊಣೆಗಾರಿಕೆ ಹೊತ್ತಿರುವ ಗುಲಾಮ್‌ ನಬೀ ಆಜಾದ್‌ ಅವರು, ಸಮಾಜವಾದಿ ಪಕ್ಷದೊಂದಿಗಿನ ಸೀಟು ಹಂಚಿಕೆ ವಿವಾದವನ್ನು ಬಗೆಹರಿಸುವಲ್ಲಿ ಪ್ರಿಯಾಂಕಾ ತೋರಿರುವ ಮುತ್ಸದ್ದಿತನಕ್ಕೆ ಅಭಿನಂದನೆ ಹೇಳಿದ್ದಾರೆ.

ಒಂದು ಹಂತದಲ್ಲಿ ಸಮಾಜವಾದಿ - ಕಾಂಗ್ರೆಸ್‌ ಪಕ್ಷದ ಚುನಾವಣಾ ಮೈತ್ರಿ ಬಹುತೇಕ ಮುರಿದು ಬೀಳುವುದಿತ್ತು; ಆ ಸಂದರ್ಭದಲ್ಲಿ ಮುಂದೆ ಬಂದ ಪ್ರಿಯಾಂಕಾ ನಿರ್ಣಾಯಕ ಪಾತ್ರ ವಹಿಸಿ ಯಶಸ್ವಿ ಸಂಧಾನ ನಡೆಸಿದರು ಎಂದವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.