ಜಲ್ಲಿಕಟ್ಟು ವಿಧೇಯಕಕ್ಕೆ ತಮಿಳುನಾಡು ವಿಧಾಸಭೆಯಲ್ಲಿ ಸರ್ವಾನುಮತದ ಅಂಗೀಕಾರ
ಜಲ್ಲಿಕಟ್ಟು ಕ್ರೀಡೆ ನಡೆಸಲು ಸಾರ್ವಜನಿಕ ಪ್ರತಿಭಟನೆಗೆ ಮಣಿದಿರುವ ತಮಿಳುನಾಡು ಸರ್ಕಾರ, ವಿಧಾನಸಭೆಯಲ್ಲಿ ಜಲ್ಲಿಕಟ್ಟು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

Published On :
ಚೆನ್ನೈ: ಜಲ್ಲಿಕಟ್ಟು ಕ್ರೀಡೆ ನಡೆಸಲು ಸಾರ್ವಜನಿಕ ಪ್ರತಿಭಟನೆಗೆ ಮಣಿದಿರುವ ತಮಿಳುನಾಡು ಸರ್ಕಾರ, ವಿಧಾನಸಭೆಯಲ್ಲಿ ಜಲ್ಲಿಕಟ್ಟು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.
ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದ್ದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಸಿಎಂ ಪನ್ನೀರ್ ಸೆಲ್ವಂ ಜಲ್ಲಿಕಟ್ಟು ವಿಧೇಯಕವನ್ನು ಮಂಡನೆ ಮಾಡಿದ್ದರು. ಸಿಎಂ ಮಂಡಿಸಿದ ವಿಧೇಯಕಕ್ಕೆ ಒಮ್ಮತದ ಅಂಗೀಕಾರ ದೊರೆತಿದ್ದು, ಜಲ್ಲಿಕಟ್ಟು ಕ್ರೀಡೆ ನಡೆಸುವುದಕ್ಕೆ ಉಂಟಾಗಿದ್ದ ಕಾನೂನಾತ್ಮಕ ತೊಡಕಿಗೆ ಪರಿಹಾರ ದೊರೆತಿದೆ. ಜಲ್ಲಿಕಟ್ಟು ಮಸೂದೆಯನ್ನು ಅಂಗೀಕರಿಸಿರುವುದನ್ನು ಎಐಎಡಿಎಂಕೆ ಪಕ್ಷ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.
ವಿಧೇಯಕ ಮಂಡನೆಗೂ ಮುನ್ನ ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
ಜಲ್ಲಿಕಟ್ಟು ಗೂಳಿಗೆ ಪೊಲೀಸ್ ಪೇದೆ ಬಲಿ
ವಿರುಧ್ ನಗರ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಜಲ್ಲಿಕಟ್ಟು ಕ್ರೀಡೆಯಲ್ಲಿ ಗೂಳಿಗೆ ವಿ.ಶಂಕರ್ (29) ಎಂಬ ಪೊಲೀಸ್ ಪೇದೆ ಬಲಿಯಾಗಿದ್ದಾರೆ. ಗೂಳಿ ದಾಳಿಗೆ ಸಿಲುಕಿದ್ದ ಶಂಕರ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು. ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ಗೂಳಿಗಳು ಭಾಗವಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Tamil Nadu assemblyತಮಿಳುನಾಡು ವಿಧಾನಸಭೆJallikattu billChief minister O Panneerselvamಜಲ್ಲಿಕಟ್ಟು ವಿಧೇಯಕಸಿಎಂ ಪನ್ನೀರ್ ಸೆಲ್ವಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


