ನೇತಾಜಿ ಸುಭಾಷ್ ಚಂದ್ರ ಬೋಸ್ 120ನೇ ಜಯಂತಿ: ಪ್ರಧಾನಿ ಮೋದಿ ಗೌರವಾರ್ಪಣೆ
ಹಿರಿಯ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ 120ನೇ ಜಯಂತಿ ಅಂಗವಾಗಿ ಪ್ರಧಾನ...

Published On :
ನವದೆಹಲಿ: ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.
ದಶಕಗಳಿಂದ ಬೇಡಿಕೆಯಲ್ಲಿರುವ ನೇತಾಜಿಯವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಹಿರಂಗಪಡಿಸಲು ತಮಗೆ ಅವಕಾಶ ಸಿಕ್ಕಿರುವುದು ಅವರಿಗೆ ನೀಡುವ ಗೌರವ ಎಂದು ಸುಭಾಷ್ ಚಂದ್ರ ಬೋಸ್ ಹೇಳಿದ್ದಾರೆ.
ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತಕ್ಕೆ ಮುಕ್ತಿ ಸಿಗಲು ನೇತಾಜಿಯವರು ಹೋರಾಡಲು ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಂತ ಬುದ್ಧಿಶಾಲಿಗಳಾಗಿದ್ದ ನೇತಾಜಿಯವರು ದೇಶದ ಜನರ ಹಿತಾಸಕ್ತಿ ಬಯಸಿದ್ದು ಇಡೀ ಸಮಾಜದ ಬಡಬಗ್ಗರು ಮತ್ತು ದೀನದಲಿತರ ಏಳಿಗೆಗಾಗಿ ಶ್ರಮಿಸಿದ್ದರು ಎಂದು ಟ್ವೀಟ್ ಮೂಲಕ ಪ್ರಧಾನಿ ಪ್ರಶಂಸಿಸಿದ್ದಾರೆ.
ನೇತಾಜಿಯವರಿಗೆ ಸಂಬಂಧಪಟ್ಟ ದಾಖಲೆಗಳು http://www.netajipapers.gov.in ನಲ್ಲಿ ಲಭ್ಯವಾಗುತ್ತದೆ.ಈ ಮಧ್ಯೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಎಂ.ವೆಂಕಯ್ಯ ನಾಯ್ಡು, ನೇತಾಜಿಯವರನ್ನು ಕಟ್ಟಾ ರಾಷ್ಟ್ರವಾದಿ ಮತ್ತು ಭಾರತವನ್ನು ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಲು ನಿರಂತರವಾಗಿ ಹೋರಾಡುತ್ತಿದ್ದರು ಎಂದು ಬಣ್ಣಿಸಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಒಡಿಶಾದ ಕಟಕ್ ನಲ್ಲಿ 1897ರಂದು ಜನಿಸಿದ್ದರು. ನೇತಾಜಿಯವರ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ಇಂದು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನೇತಾಜಿಯವರಿಗೆ ಪುಷ್ಪ ನಮನ ಸಲ್ಲಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿbirth anniversaryhomageನೇತಾಜಿ ಸುಭಾಷ್ ಚಂದ್ರ ಬೋಸ್Netaji Subhash Chandra Boseಜನ್ಮ ಶತಮಾನೋತ್ಸವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


