ಫೆ.1ರಂದೇ ಕೇಂದ್ರ ಬಜೆಟ್ ಮಂಡನೆಗೆ ಸುಪ್ರೀಂ ಅಸ್ತು
ಪಂಚರಾಜ್ಯಗಳ ಚುನಾವಣೆ ಹಿನ್ನೆಲೆ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ದಿನಾಂಕವನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ...
Published On :
ನವದೆಹಲಿ: ಪಂಚರಾಜ್ಯಗಳ ಚುನಾವಣೆ ಹಿನ್ನೆಲೆ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ದಿನಾಂಕವನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ಉತ್ತರಪ್ರದೇಶ, ಪಂಜಾಬ್ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಫೆಬ್ರವರಿಯಲ್ಲಿ ನಡೆಯಲಿದ್ದು ಹೀಗಾಗಿ ಬಜೆಟ್ ಮಂಡನೆ ದಿನಾಂಕವನ್ನು ಮುಂದೂಡುವಂತೆ ದೆಹಲಿ ಮೂಲದ ವಕೀಲ ಎಂಎಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ವಿಪಕ್ಷಗಳಿಗೂ ಕೂಡ ತೀವ್ರ ಹಿನ್ನಡೆಯಾಗಿದೆ.
ಬಜೆಟ್ ಘೋಷಣೆ ಮತದಾರನ ಮೇಲೆ ಪ್ರಭಾವ ಬೀರುತ್ತೆ ಎಂಬ ವ್ಯಾಖ್ಯಾನ ಅರ್ಥಹೀನವಾಗಿದೆ. ಒಂದು ವೇಳೆ ವರ್ಷವಿಡೀ ವಿವಿಧ ರಾಜ್ಯಗಳ ಚುನಾವಣೆ ನಡೆಯುತ್ತಿದ್ದರೆ ಆಗಲೂ ಕೇಂದ್ರ ಸರ್ಕಾರ ಬಜೆಟ್ ಮಂಡಿಸಬಾರದೇ ಎಂದು ಪ್ರಶ್ನಿಸಿದೆ.
ಫೆಬ್ರವರಿ 4ರಂದು ಪಂಚರಾಜ್ಯಗಳ ಚುನಾವಣೆ ಆರಂಭಗೊಳ್ಳಲಿದೆ ಹಾಗಾಗಿ ಕೇಂದ್ರ ಬಜೆಟ್ ಘೋಷಣೆ ಮತದಾರನ ಮೇಲೆ ಪ್ರಭಾವ ಬೀರುತ್ತೆ. ಇದರಿಂದಾಗಿ ದಿನಾಂಕವನ್ನು ಮುಂದೂಡಬೇಕೆಂದು ಕೋರಿ ವಿಪಕ್ಷಗಳು ಅರ್ಜಿ ಸಲ್ಲಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtNarendra Modiನರೇಂದ್ರ ಮೋದಿCongressಕಾಂಗ್ರೆಸ್bjpಬಿಜೆಪಿಸುಪ್ರೀಂ ಕೋರ್ಟ್Union Budgetಕೇಂದ್ರ ಬಜೆಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

