ದೇಶ

ಮನೋಹರ್ ಪರಿಕ್ಕರ್ ಅವರೇ ಗೋವಾದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ: ಅಮಿತ್ ಶಾ

ಚುನಾವಣೆಗೆ ಸಜ್ಜಾಗಿರುವ ಗೋವಾ ರಾಜ್ಯಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಬಿಜೆಪಿ ಮುಖ್ಯಮಂತ್ರಿ...

ಮನೋಹರ್ ಪರಿಕ್ಕರ್ ಅವರೇ ಗೋವಾದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ: ಅಮಿತ್ ಶಾ
ಮನೋಹರ್ ಪರಿಕ್ಕರ್
Published On :
ಪಣಜಿ: ಚುನಾವಣೆಗೆ ಸಜ್ಜಾಗಿರುವ ಗೋವಾ ರಾಜ್ಯಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗುತ್ತದೆ ಎಂಬ ಊಹಾಪೋಹಗಳ ನಡುವೆ ನಿನ್ನೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯದಲ್ಲಿ ಮುಂದಿನ ಸರ್ಕಾರ ಸಚಿವ ಮನೋಹರ್ ಪರಿಕ್ಕರ್ ಅವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಲಿದ್ದಾರೆ.
ಗೋವಾ ದೇಶಕ್ಕೆ ಬಹುದೊಡ್ಡ ಆಸ್ತಿಯಾದ ಮನೋಹರ್ ಪರಿಕ್ಕರ್ ಅವರನ್ನು ಕೊಡುಗೆಯಾಗಿ ನೀಡಿದೆ. ಪರಿಕ್ಕರ್ ಅವರಿಗೆ ದೆಹಲಿ ಮತ್ತು ಗೋವಾ ಎರಡೂ ಕಡೆಯಲ್ಲಿ ಬೇಡಿಕೆಯಿದೆ. ಗೋವಾದ ಜನರು ಮತ್ತೆ ಪರಿಕ್ಕರ್ ಅವರು ರಾಜ್ಯಕ್ಕೆ ಮರಳಬೇಕು ಎಂದು ಕೇಳುತ್ತಿದ್ದಾರೆ ಎಂದು ಅಮಿತ್ ಶಾ ವಾಸ್ಕೊ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪ್ರಸ್ತುತ ರಕ್ಷಣಾ ಸಚಿವರಾಗಿರುವ ಮನೋಹರ್ ಪರಿಕ್ಕರ್ ಈ ಹಿಂದೆ ಗೋವಾ ಮುಖ್ಯಮಂತ್ರಿಯಾಗಿದ್ದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪರಿಕ್ಕರ್ ಅವರು ದೆಹಲಿಯಲ್ಲಿರಲು ಬಯಸುತ್ತಾರೆ. ಚುನಾವಣೆ ಮುಗಿದ ನಂತರ ನಾವು ಅವರು ಎಲ್ಲಿರಬೇಕೆಂದು ನಿರ್ಧರಿಸುತ್ತೇವೆ. ಆದರೆ ಅವರು ಎಲ್ಲಿಯೇ ಇದ್ದರೂ ಕೂಡ ಗೋವಾದ ಮುಂದಿನ ಸರ್ಕಾರ ಅವರ ನಾಯಕತ್ವದಡಿಯಲ್ಲಿಯೇ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಸಚಿವ ನಿತಿನ್ ಗಡ್ಕರಿಯವರು ಪ್ರಸ್ತುತ ಗೋವಾ ರಾಜ್ಯದ ಬಿಜೆಪಿ ಪಕ್ಷದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.