ಬಿಜೆಪಿಗೆ ಸೇರ್ಪಡೆಗೊಂಡ ನಟಿ ರಿಮಿ ಸೇನ್
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ಬಾಲಿವುಡ್ ನಟಿ ರಿಮಿ ಸೇನ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ...

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ಬಾಲಿವುಡ್ ನಟಿ ರಿಮಿ ಸೇನ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರ ಪಂಚರಾಜ್ಯಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆಗಳು ಆರಂಭವಾಗುತ್ತಿದ್ದು, ಈ ಹಿನ್ನಲೆಯಲ್ಲಿ ನಟಿ ರಿಮಿ ಸೇನ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಹೇಳಿಕೆ ನೀಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಪ್ರೇರಿತಳಾಗಿರುವ ನಾನು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ಕೇವಲ ನಾನೊಬ್ಬಳೇ ಅಲ್ಲ ಇಡೀ ದೇಶದ ಜನತೆಯೇ ಮೋದಿಯವರಿಂದ ಸ್ಪೂರ್ತಿಗೊಂಡಿದೆ. ಪಕ್ಷ ಯಾವುದೇ ಕೆಲಸ ಕೊಟ್ಟರೂ ಅದನ್ನು ಮಾಡಲು ನಾನು ಸಿದ್ಧಳಿದ್ದೇನೆ. ಇದೀಕ ಸರ್ಕಾರ ನನಗೆ ಜವಾಬ್ದಾರಿಯೊಂದನ್ನು ನೀಡಿದೆ. ಆ ಜವಾಬ್ದಾರಿಯನ್ನು ಪೂರ್ಣಗೊಳಿಸುತ್ತೇನೆಂದು ಹೇಳಿದ್ದಾರೆ.
2003ರಲ್ಲಿ ಹಂಗಾಮಾ ಎಂಬ ಕಾಮಿಡಿ ಚಿತ್ರದ ಮೂಲಗ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದ ನಟಿ ರಿಮಿ ಸೇನ್ ಅವರು, ಬಾಲಿವುಡ್ ಸೂಪರ್ ಸ್ಟಾನ್ ನಟ ಸಲ್ಮಾನ್ ಖಾನ್, ಅಜಯ್ ದೇವಗಣ್ ಮತ್ತು ಅಕ್ಷಯ್ ಕುಮಾರ್ ಅವರ ಜೊತೆಗೆ ನಟಿಸಿದ್ದಾರೆ. ಅಲ್ಲದೆ, 2015ರಲ್ಲಿ ಹಿಂದಿ ಬಿಗ್ ಬಾಸ್ ರಿಯಾಲಿಟೋ ಶೋಗೂ ಸ್ಪರ್ಧಿಯಾಗಿ ಹೋಗಿದ್ದರು. ಬಿಗ್ ಬಾಸ್ 9ನೇ ಆವೃತ್ತಿಯಲ್ಲಿ 50 ದಿನಗಳ ಕಾಲ ಯಾವುದೇ ಟಾಸ್ಕ್ ಮಾಡದೆಯೇ ಕಾಲ ಮುಂದೂಡಿದ್ದ ಈ ನಟಿ, ಬಿಗ್ ಬಾಸ್ ವಿಜೇತ ಪ್ರಿನ್ಸ್ ನರುಲಾಗಿಂತಲೂ ಹೆಚ್ಚಿನ ಹಣವನ್ನು ಪಡೆಯುವ ಮೂಲಕ ಸುದ್ದಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


