ಉತ್ತರಪ್ರದೇಶ ಚುನಾವಣೆ: ರೂ.3 ಲಕ್ಷ ಅಕ್ರಮ ಹಣ ವಶಕ್ಕೆ
ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರಿಗೆ ನೀಡುವ ಹಣದ ಆಮಿಷಗಳು ಹೆಚ್ಚಾಗತೊಡಗಿವೆ. ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದಾಖಲೆಯಿಲ್ಲದ ರೂ.3 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ...

ಮಥುರಾ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರಿಗೆ ನೀಡುವ ಹಣದ ಆಮಿಷಗಳು ಹೆಚ್ಚಾಗತೊಡಗಿವೆ. ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದಾಖಲೆಯಿಲ್ಲದ ರೂ.3 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ವಾಹನವನ್ನು ಭದ್ರತಾ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ. ಕಾರಿನಲ್ಲಿ ಓರ್ವ ವ್ಯಕ್ತಿಯೊಂದಿಗೆ ಆರ್ ಎಲ್ ಡಿ ಪಕ್ಷದ ಅಭ್ಯರ್ಥಿಯ ಸಹೋದರ ಕುಳಿತಿದ್ದರು. ಕಾರಿನಲ್ಲಿ ದಾಖಲೆಯಿಲ್ಲದ ರೂ.3 ಲಕ್ಷ ಹಣ ದೊರೆತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಚುನಾವಣೆ ಹತ್ತಿರಬರುತ್ತಿರುವ ಹಿನ್ನೆಲೆಯಲ್ಲಿ ವಾಹನಗಳನ್ನು ತಪಾಸಣೆಗೊಳಪಡಿಸಲಾಗುತ್ತಿತ್ತು. ಈ ವೇಳೆ ಆರ್ ಎಲ್ ಡಿ ಪಕ್ಷದ ಅಭ್ಯರ್ಥಿ ಯೋಗೇಶ್ ನೋಹಾರ್ ಅವರ ಸಹೋದರನ ಕಾರು ಬಂದಿತ್ತು. ತಪಾಸಣೆ ವೇಳೆ ರೂ.1.66 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಧ್ಯಮ ಧೃಡೀಕರಣ ಮತ್ತು ಪರಿವೀಕ್ಷಣಾ ಸಮಿತಿ (ಎಂಸಿಎಂಸಿ) ಉಸ್ತುವಾರಿ ಎಡಿಎಂ ರವೀಂದ್ರ ಕುಮಾರ್ ಅವರು ಅವರು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಚುನಾವಣೆ ಹತ್ತಿರಬರುತ್ತಿದ್ದು, ಈ ಹಿನ್ನಲೆಯಲ್ಲಿ ನೀತಿ ಸಂಹಿತೆಯನ್ನು ಜಾರಿಗೆ ತರಲಾಗಿದೆ. ಇದರಂತೆ ಚುನಾವಣಾ ಕ್ಷೇತ್ರದ ಆಸುಪಾಸಿನಲ್ಲಿ ರೂ.50 ಸಾವಿರಕ್ಕೂ ಹೆಚ್ಚು ಹಣವನ್ನು ತೆಗೆದುಕೊಂಡು ಹೋಗುವಾಗ ಅವುಗಳಿಗೆ ಸೂಕ್ತ ರೀತಿಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ. ದಾಖಲೆ ಇಲ್ಲದ ಹಣವನ್ನು ಚುನಾವಣಾ ಆಯೋಗದ ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


