'ಸ್ವಾರ್ಥ' ಪ್ರಿಯಕರನ ಮರ್ಮಾಂಗ ಕತ್ತರಿಸಿದ ಪ್ರೇಯಸಿ
ಅತಿಯಾದ ಪ್ರೀತಿ, ವ್ಯಾಮೋಹ ಏನೆಲ್ಲಾ ಎಡವಟ್ಟುಗಳನ್ನು ಮಾಡಿಸುತ್ತದೆ ಎಂಬುದಕ್ಕೆ ಇದು ಒಂದು ನಿದರ್ಶನ. ಪ್ರಿಯಕರನ ಮೇಲಿನ ಅತಿಯಾದ ಪ್ರೀತಿಯಿಂದಾಗಿ...

ಭೂಪಾಲ್: ಅತಿಯಾದ ಪ್ರೀತಿ, ವ್ಯಾಮೋಹ ಏನೆಲ್ಲಾ ಎಡವಟ್ಟುಗಳನ್ನು ಮಾಡಿಸುತ್ತದೆ ಎಂಬುದಕ್ಕೆ ಇದು ಒಂದು ನಿದರ್ಶನ. ಪ್ರಿಯಕರನ ಮೇಲಿನ ಅತಿಯಾದ ಪ್ರೀತಿಯಿಂದಾಗಿ ಪ್ರೇಯಸಿ ಆತನ ಮರ್ಮಾಂಗವನ್ನೇ ಕತ್ತರಿಸಿ ಹಾಕಿದ್ದಾರೆ.
ಮಧ್ಯಪ್ರದೇಶದ ಸಿಂಧಿ ಜಿಲ್ಲೆಯ ನೌಗವಾನ್ ದರ್ಶನ್ ಸಿಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. 20ರ ಹರೆಯದ ಯುವತಿ ಅದೇ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದು ಜಾತಿ ಸಮಸ್ಯೆಯಿಂದಾಗಿ ಇಬ್ಬರ ಪ್ರೀತಿಯನ್ನು ಪೋಷಕರು ನಿರಾಕರಿಸಿದ್ದರು. ಇದರಿಂದ ಮನನೊಂದ ಯುವತಿ ಮುಂದೆ ತನ್ನ ಪ್ರಿಯಕರನಿಗೆ ಬೇರೊಂದು ಯುವತಿಯೊಂದಿಗೆ ಮದುವೆ ಆದರೂ ಲೈಂಗಿಕ ಸುಖ ಅನುಭವಿಸಬಾರದು ಎಂದು ಕಾರಣಕ್ಕೆ ಈ ರೀತಿ ಮಾಡಿದ್ದಾಳೆ.
ಪ್ರಕರಣ ದಾಖಲಿಸಿಕೊಂಡಿರುವ ಜಾಮ್ಹೊರಿ ಪೊಲೀಸರು ತುಂಡಾದ ಭಾಗವನ್ನು ವಶಕ್ಕೆ ಪಡೆದಿದ್ದು. ಯುವತಿಯ ವಿರುದ್ಧ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಸೋಮವಾರ ರಾತ್ರಿ ಯುವತಿ ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ ಹಾಕಿದ್ದು ನಂತರ ಪೋಷಕರು ಆತನನ್ನು ಆಸ್ಪತ್ರೆಗೆ ದಾಖಲಿಸಿದರು. ತೀವ್ರ ರಕ್ತಸ್ರಾವದಿಂದಾಗಿ ಜಿಲ್ಲಾಸ್ಪತ್ರೆಯ ವೈದ್ಯರು ರೇವಾದಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆಗೆ ರವಾನಿಸುವಂತೆ ಸೂಚಿಸಿದ್ದಾರೆ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


