ದೇಶ

ಗಣರಾಜ್ಯೋತ್ಸವ ಪರೇಡ್ ವೇಳೆ ವಾಯು ದಾಳಿ ಕುರಿತು ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ

ರಾಜಧಾನಿ ದೆಹಲಿಯ ಮೇಲೆ ಉಗ್ರರು ಕೆಂಗಣ್ಣು ಬೀರಿದ್ದು, ಗಣರಾಜ್ಯೋತ್ಸವ ಪರೇಡ್ ವೇಳೆ ವಾಯು ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂದು...

ಗಣರಾಜ್ಯೋತ್ಸವ ಪರೇಡ್ ವೇಳೆ ವಾಯು ದಾಳಿ ಕುರಿತು ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ
ರಾಜಧಾನಿ ನವದೆಹಲಿ (ಸಂಗ್ರಹ ಚಿತ್ರ)
Published On :

ನವದೆಹಲಿ: ರಾಜಧಾನಿ ದೆಹಲಿಯ ಮೇಲೆ ಉಗ್ರರು ಕೆಂಗಣ್ಣು ಬೀರಿದ್ದು, ಗಣರಾಜ್ಯೋತ್ಸವ ಪರೇಡ್ ವೇಳೆ ವಾಯು ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ  ಬುಧವಾರ ಎಚ್ಚರಿಕೆ ನೀಡಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನಾ ಪಡೆ ಸೀಮಿತ ದಾಳಿ ನಡೆಸಿದ ಬಳಿಕ ದೇಶದಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರ ಸಂಘಟನೆಗಳು ಸುದೀರ್ಘವಾಗಿ ಸಂಚು ರೂಪಿಸುತ್ತಲೇ ಇದೆ. ಇದರಂತೆ ಗಣರಾಜ್ಯೋತ್ಸವ ದಿನದಂದು 9/11 ಮುಂಬೈ ಮಾದರಿಯಂತೆ ದಾಳಿ ನಡೆಸಲು ಯೋಜನೆ ರೂಪಿಸಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

ಗುಪ್ತಚರ ಇಲಾಕೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ಸಹಸ್ರಾರು ಪೊಲೀಸರು ಮತ್ತು ಅರೆಸೇನಾ ಪಡೆಗಳನ್ನು ನಿಯೋಜನೆ ಮಾಡಲಾಗಿದ್ದು, ಸಂಭಾವ್ಯ ವಾಯುದಾಳಿ ಹತ್ತಿಕ್ಕಲು ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

ಸಶಸ್ತ್ರ ಪಡೆಗಳ ಮಹಾದಂಡ ನಾಯಕರಾಗಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಸೇನಾ ಪಡೆಗಳ ಪರೇಡ್ ವೀಕ್ಷಿಸಲು ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ರಾಜ್'ಪಥ್ ನಲ್ಲಿ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಮತ್ತು ನವದೆಹಲಿ ಪ್ರದೇಶದಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿ ಪೊಲೀಸ್ ಪಡೆ ಮತ್ತು ಕೇಂದ್ರೀಯ ಭದ್ರತಾ ಪಡೆಗಳಿಂದ ಆರಿಸಲಾದ ಸುಮಾರು 50 ಸಾವಿರ ಮಂದಿ ಭದ್ರತಾ ಸಿಬ್ಬಂದಿ ರಾಜಧಾನಿಯ ಮೂಲೆ ಮೂಲೆಗಳಲ್ಲೂ ಕಣ್ಗಾವಲಿರಿಸಲಿದ್ದಾರೆಂದು ತಿಳಿದುಬಂದಿದೆ.

ಲಷ್ಕರ್-ಇ-ತೊಯ್ಬಾದಂತಹ ಉಗ್ರ ಸಂಘಟನೆಗಳು ದಾಳಿಗೆ ಹೆಲಿಕಾಪ್ಟರ್ ಚಾರ್ಟರ್ ಸೇವೆ ಮತ್ತು ಚಾರ್ಟರ್ ವಿಮಾನಗಳನ್ನು ಬಳಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಈ ಹಿನ್ನಲೆಯಲ್ಲಿ ಸಂಭಾವ್ಯ ದಾಳಿಯನ್ನು ವಿಫಲಗೊಳಿಸಲು ಅಥವಾ ಅನುಮಾನಾಸ್ಫದ ಹಾರುವ ವಸ್ತುಗಳನ್ನು ಗುರ್ತಿಸಲು ಡ್ರೋಣ್-ನಿರೋಧಿ ತಂತ್ರಜ್ಞಾನವನ್ನು ಪೊಲೀಸರು ಬಳಕೆ ಮಾಡಲು ಮುಂದಾಗಿದ್ದಾರೆಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದಲ್ಲದೆ ಭದ್ರತಾ ಪಡೆಗಳು ವಿಮಾನ ನಿರೋಧಕ ಬಂದೂಕುಗಳನ್ನು ಎತ್ತರ ಕಟ್ಟಡಗಳ ಮೇಲೆ ನಿಂತು ಕಣ್ಗಾವಲಿರಿಸಲಿದ್ದಾರೆ. ಈಗಾಗಲೇ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ನಿಯಂತ್ರಣ ಕೊಠಿಡಿಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.