ದೇಶ

ಕಾಶ್ಮೀರದಲ್ಲಿ ಭಾರಿ ಹಿಮಪಾತ: 2 ಪ್ರಕರಣಗಳಲ್ಲಿ 6 ಯೋಧರ ಸಾವು

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಯೋಧರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಕಾಶ್ಮೀರದಲ್ಲಿ ಭಾರಿ ಹಿಮಪಾತ: 2 ಪ್ರಕರಣಗಳಲ್ಲಿ 6 ಯೋಧರ ಸಾವು
ಸಂಗ್ರಹ ಚಿತ್ರ
Published On :

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಯೋಧರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ನಿನ್ನೆ ಗುರೇಜ್ ಸೆಕ್ಟರ್ ನಲ್ಲಿ ಹಿಮಪಾತವಾಗಿ ಹಲವು ಯೋಧರು ನಾಪತ್ತೆಯಾಗಿದ್ದರು. ಕೂಡಲೇ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ನಿನ್ನೆ ನಾಪತ್ತೆಯಾಗಿದ್ದವರ ಪೈಕಿ 7 ಯೋಧರನ್ನು ರಕ್ಷಿಸಲಾಗಿತ್ತು. ಆದರೆ ಮೂವರ  ಯೋಧರ ಮೃತ ದೇಹಗಳು ಇಂದು ಬೆಳಗ್ಗೆ ಪತ್ತೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಇನ್ನು ಇಂದು ಇದೇ ಗುರೇಜ್ ಸೆಕ್ಟರ್ ನಲ್ಲಿ ಮತ್ತೆ ಹಿಮಪಾತವಾಗಿದ್ದು, ಗಡಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಿ ಕ್ಯಾಂಪ್ ಗೆ ವಾಪಸಾಗುತ್ತಿದ್ದ ಯೋಧರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಈಗಾಗಲೇ ರಕ್ಷಣಾ  ಕಾರ್ಯಾಚರಣೆ ಆರಂಭವಾಗಿದ್ದು, ಸೇನೆಯ ನುರಿತ ತಜ್ಞರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಹಲವು ಯೋಧರು ಹಿಮಪಾತದಲ್ಲಿ ನಾಪತ್ತೆಯಾಗಿದ್ದು, ಈಗಲೇ ಸಾವಿನ ಸಂಖ್ಯೆ  ಕುರಿತು ನಿಖರ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆಯಷ್ಟೇ ಇದೇ ಕಾಶ್ಮೀರದ ಸೋನಾಮಾರ್ಗ್ ಸಮೀಪದ ಸೇನಾ ಕ್ಯಾಂಪ್ ಬಳಿ ಸಂಭವಿಸಿದ ಹಿಮಪಾತದಿಂದಾಗಿ ಸೇನಾಧಿಕಾರಿ ಮೇಜರ್ ಅಮಿತ್ ಸಾಗರ್ ಸೇರಿದಂತೆ ಐದು ಮಂದಿ ಸಾವನ್ನಪ್ಪಿದ್ದರು. ಅಂತೆಯೇ  ಹಿಮದಡಿಯಲ್ಲಿ ಸಿಲುಕಿ ಪ್ರಾಣಾಪಾಯದಲ್ಲಿದ್ದ ಇತರೆ ನಾಲ್ಕು ಮಂದಿ ಯೋಧರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿತ್ತು. ಇದರ ಬೆನ್ನಲ್ಲೇ ಮತ್ತೆ ಹಿಮಪಾತವಾಗಿದ್ದು, ಹಲವು ಸೈನಿಕರು ನಾಪತ್ತೆಯಾಗಿದ್ದಾರೆ.

ಕಳೆದೊಂದು ವಾರದಿಂದ ಜಮ್ಮು ಮತ್ತು ಕಾಶ್ಮೀರದ ಹವಮಾನದಲ್ಲಿ ಭಾರಿ ಏರುಪೇರಾಗುತ್ತಿದ್ದು, ಭಾರಿ ಪ್ರಮಾಣದ ಹಿಮಪಾತವಾಗುತ್ತಿದೆ. ತಾಪಮಾನ ಕುಸಿತ ಹಾಗೂ ಹಿಮಪಾತಗಳಿಂದಾಗಿ ಗಡಿಯಲ್ಲಿ ಸೈನಿಕರು ಕರ್ತವ್ಯ  ನಿರ್ವಹಿಸುವುದೇ ದುಸ್ತರವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.