ಗಣರಾಜ್ಯೋತ್ಸವ ದಿನವೇ ಅಸ್ಸಾಂ, ಮಣಿಪುರದಲ್ಲಿ ಸರಣಿ ಬಾಂಬ್ ಸ್ಫೋಟ
68ನೇ ಗಣರಾಜ್ಯೋತ್ಸವ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿರುವಾಗಲೇ ಅಸ್ಸಾಂನಲ್ಲಿ ಉಲ್ಫಾ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ...

ಗುವಾಹಟಿ: 68ನೇ ಗಣರಾಜ್ಯೋತ್ಸವ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿರುವಾಗಲೇ ಅಸ್ಸಾಂನಲ್ಲಿ ಉಲ್ಫಾ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ.
ಅಸ್ಸಾಂನ ಚರಾಯ್ಡೋಮ್, ಸಿಬ್ ಸಾಗರ್, ದೀಬ್ರುಗಡ್ ಮತ್ತು ತಿನ್ಸುಕಿಯಾ ಜಿಲ್ಲೆಯಲ್ಲಿ ಉಲ್ಫಾ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.
ದೀಬ್ರುಗಢದಲ್ಲಿ ಗಣರಾಜ್ಯೋತ್ಸವ ಸಮಾರಂಭ ನಡೆಯುವ ಮೈದಾನದಿಂದ 500 ಮೀಟರ್ ದೂರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಮಣಿಪುರದ ರಾಜಧಾನಿ ಇಂಪಾಲಾದಲ್ಲೂ ಎರಡು ಕಡೆ ಬಾಂಬ್ ಸ್ಫೋಟ್ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


