ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅಕಾಲಿ ದಳಕ್ಕೆ ಮತ ಹಾಕಿದಂತೆಯೇ: ಅಮರಿಂದರ್ ಸಿಂಗ್
ಪಂಜಾಬ್ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅದು ಶಿರೋಮಣಿ ಅಕಾಲಿ ದಳಕ್ಕೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಮರಿಂದರ್ ಸಿಂಗ್ ಹೇಳಿದ್ದಾರೆ.

Published On :
ಚಂಡೀಗಢ: ಪಂಜಾಬ್ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದರೆ ಅದು ಶಿರೋಮಣಿ ಅಕಾಲಿ ದಳಕ್ಕೆ ಮತ ಹಾಕಿದಂತೆ ಎಂದು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷ ಹಾಗೂ ಶಿರೋಮಣಿ ಅಕಾಲಿದಳ ಪಕ್ಷಗಳನ್ನು ಮೂಲಭೂತವಾದಿ ಸಿದ್ಧಾಂತಗಳನ್ನು ಹೊಂದಿರುವ ಪಕ್ಷಗಳೆಂದು ಹೇಳಿರುವ ಅಮರಿಂದರ್ ಸಿಂಗ್, ಎಚ್ಚರಿಕೆಯಿಂದ ಮತ ಚಲಾವಣೆ ಮಾಡುವಂತೆ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಅಕಾಲಿದಳದವರು 10 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಲೂಟಿ ಮಾಡುತ್ತಿದ್ದರೆ ಆಮ್ ಆದ್ಮಿ ಪಕ್ಷ ಪಂಜಾಬಿಯತ್ ನ್ನು ಹಾಳು ಮಾಡಲು ಹೊರಗಿನಿಂದ ಜನರನ್ನು ಕರೆಸಿದೆ ಎಂದು ಸಾರ್ವಜನಿಕ ಸಭೆಯಲ್ಲಿ ಆರೋಪಿಸಿದ್ದಾರೆ.
ಅಕಾಲಿ ದಳದ ಆಡಳಿತದಲ್ಲಿ ಜನತೆ ಸಾಕಷ್ಟು ನೊಂದಿದ್ದಾರೆ. ಪಂಜಾಬ್ ನ್ನು ಲೂಟಿ ಮಾಡಿರುವ ಪ್ರಕಾಶ್ ಸಿಂಗ್ ಬಾದಲ್ ಕ್ಷೇತ್ರದಿಂದಲೇ ಸ್ಪರ್ಧಿಸಿ ಪಾಠ ಕಲಿಸಲಿದ್ದೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Punjabಪಂಜಾಬ್Shiromani Akali DalAmarinder Singhಅಮರಿಂದರ್ ಸಿಂಗ್ವಿಧಾನಸಭಾ ಚುನಾವಣೆ-2017assembly elections-2017ಶಿರೋಮಣಿ ಅಕಾಲಿ ದಳ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


