ದೇಶ

ಮಹಾರಾಷ್ಟ್ರ: ಸ್ಥಳೀಯ ಸಂಸ್ಥೆ ಚುನಾವಣೆಗೆ ಶಿವಸೇನೆ-ಎಂಎನ್ಎಸ್ ಮೈತ್ರಿ?

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಅಂತ್ಯಗೊಂಡಿರುವುದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶಿವಸೇನೆ-ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮೈತ್ರಿಗೆ ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಮಹಾರಾಷ್ಟ್ರ: ಸ್ಥಳೀಯ ಸಂಸ್ಥೆ ಚುನಾವಣೆಗೆ ಶಿವಸೇನೆ-ಎಂಎನ್ಎಸ್ ಮೈತ್ರಿ?
ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎಂಎನ್ಎಸ್ ನಾಯಕ ರಾಜ್ ಠಾಕ್ರೆ
Published On :
ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಅಂತ್ಯಗೊಂಡಿರುವುದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶಿವಸೇನೆ-ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮೈತ್ರಿಗೆ ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. 
ಮೈತ್ರಿ ಕುರಿತು ಎಂಎನ್ಎಸ್-ಶಿವಸೇನೆ ನಡುವೆ ಮಾತುಕತೆ ನಡೆಯುತ್ತಿರುವುದರ ಬಗ್ಗೆ ಸ್ವತಃ ಎಂಎನ್ಎಸ್ ಶಿವಸೇನೆ ನಾಯಕರು ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ಪ್ರಾಥಮಿಕ ಹಂತದಲ್ಲಿದೆ ಎಂದು ಹೇಳಿದ್ದಾರೆ. 177:50 ಅನುಪಾತದಲ್ಲಿ ಸೀಟು ಹಂಚಿಕೆ ನಡೆಯಲಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. 
ನಾಸಿಕ್, ಪುಣೆ, ಥಾಣೆ ಸೇರಿದಂತೆ ಮುಂಬೈ ನ ಹೊರಗೆ ನಡೆಯಲಿರುವ 25 ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮೈತ್ರಿ ನಡೆಯುವ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ. ಒಂದೆರಡು ದಿನಗಳಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. 
ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.