ರಿಲಯನ್ಸ್ ಮುಖ್ಯಸ್ಥೆ ನೀತಾ ಅಂಬಾನಿಗೆ ಪ್ರತಿಷ್ಟಿತ "ದಿ ಮೆಟ್" ಗೌರವ
ರಿಲಯನ್ಸ್ ಫೌಂಡೇಶನ್ಸ್ ಸಂಸ್ಥೆಯ ಮುಖ್ಯಸ್ಥೆ ನೀತಾ ಅಂಬಾನಿ ಅವರು ನ್ಯೂಯಾರ್ಕ್ ನ ಪ್ರತಿಷ್ಟಿತ ಮ್ಯೂಸಿಯಂ ಆಫ್ ಆರ್ಟ್ (ಮೆಟ್) ಗೌರವಕ್ಕೆ ಪಾತ್ರರಾಗಿದ್ದಾರೆ.

ನ್ಯೂಯಾರ್ಕ್: ರಿಲಯನ್ಸ್ ಫೌಂಡೇಶನ್ಸ್ ಸಂಸ್ಥೆಯ ಮುಖ್ಯಸ್ಥೆ ನೀತಾ ಅಂಬಾನಿ ಅವರು ನ್ಯೂಯಾರ್ಕ್ ನ ಪ್ರತಿಷ್ಟಿತ ಮ್ಯೂಸಿಯಂ ಆಫ್ ಆರ್ಟ್ (ಮೆಟ್) ಗೌರವಕ್ಕೆ ಪಾತ್ರರಾಗಿದ್ದಾರೆ.
ಶಿಕ್ಷಣ, ಕ್ರೀಡೆ, ಆರೋಗ್ಯ ಸೇವೆ, ಗ್ರಾಮೀಣಾಭಿವೃದ್ಧಿ, ನಗರೀಕರಣ, ವಿಪತ್ತು ನಿರ್ವಹಣೆ, ಮಹಿಳಾ ಸಬಲೀಕರಣ ಮತ್ತು ಕಲೆ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ನೀತಾ ಆಂಬಾನಿ ಅವರಿಗೆ ಈ ಗೌರವ ನೀಡಲಾಗಿದೆ. ಆ ಮೂಲಕ ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾದ ದಕ್ಷಿಣ ಏಷ್ಯಾದ ಮೊದಲ ವ್ಯಕ್ತಿ ಎಂಬ ಗೌರವಕ್ಕೆ ನೀತಾ ಅಂಬಾನಿ ಅವರು ಪಾತ್ರರಾಗಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ನೀತಾ ಆಂಬಾನಿ ಅವರು, "ಭಾರತದ 10 ದಶಲಕ್ಷ ಮಂದಿ ರಿಲಯನ್ಸ್ ಸೇವೆಗಳನ್ನು ಬಳಸುತ್ತಿದ್ದು, ನಗರ/ಗ್ರಾಮೀಣ ಪ್ರದೇಶದ 11 ಸಾವಿರಕ್ಕೂ ಹೆಚ್ಚು ಮಂದಿಯನ್ನು ತಲಪುವಲ್ಲಿ ರಿಲಯನ್ಸ್ ಸಂಸ್ಥೆ ಯಶಸ್ವಿಯಾಗಿದೆ. ಈ ಗೌರವದಿಂದ ಸುಸ್ಥಿರ ಅಭಿವೃದ್ಧಿ, ಸಬಲೀಕರಣದತ್ತ ನಮ್ಮ ಬದ್ಧತೆಯನ್ನು ಗಟ್ಟಿಗೊಳಿಸಲಿದೆ ಎಂದು ಹೇಳಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ನಿರ್ದೇಶಕರಲ್ಲಿ ಒಬ್ಬರಾಗಿರುವ ನೀತಾ ಅಂಬಾನಿ ಅವರು 2010 ರಿಲಯನ್ಸ್ ಫೌಂಡೇಷನ್ಸ್ ಸಂಸ್ಥೆ ಸ್ಥಾಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


