ದೇಶ

ನೂತನ ವಿನ್ಯಾಸ, ಸುರಕ್ಷತೆಯೊಂದಿಗೆ ಶೀಘ್ರವೇ 1000 ರು. ಹೊಸ ನೋಟು ಬಿಡುಗಡೆ

ಒಂದು ಸಾವಿರ ರುಪಾಯಿಯ ಹೊಸ ನೋಟನ್ನು ಶೀಘ್ರದಲ್ಲೇ ಚಲಾವಣೆಗೆ ತರಲು ಆರ್ ಬಿ ಐ ನಿರ್ಧರಿಸಿದೆ....

ನೂತನ ವಿನ್ಯಾಸ, ಸುರಕ್ಷತೆಯೊಂದಿಗೆ ಶೀಘ್ರವೇ 1000 ರು. ಹೊಸ ನೋಟು ಬಿಡುಗಡೆ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
Published On :

ನವದೆಹಲಿ: ಒಂದು ಸಾವಿರ ರುಪಾಯಿಯ ಹೊಸ ನೋಟನ್ನು ಶೀಘ್ರದಲ್ಲೇ ಚಲಾವಣೆಗೆ ತರಲು ಆರ್ ಬಿ ಐ ನಿರ್ಧರಿಸಿದೆ.

ಹೊಸ ವಿನ್ಯಾಸದ 1,000 ರು ಮುಖಬೆಲೆಯ ನೋಟುಗಳ ಮುದ್ರಣದ ಕೆಲಸವನ್ನು ಆರ್‌ಬಿಐ ತ್ವರಿತಗೊಳಿಸಿದೆ. ಹಳೆಯ 1,000 ರು. ಮುಖಬೆಲೆಯ ನೋಟುಗಳಿಗಿಂತ ಹೊಸ ನೋಟು ಗಾತ್ರದಲ್ಲಿ ಚಿಕ್ಕದಾಗಿರಲಿದ್ದು, ಸುರಕ್ಷತೆಗೆ ಸಂಬಂಧಿಸಿ ಹೆಚ್ಚು ಅಂಶಗಳನ್ನು ಹೊಂದಿರಲಿದೆ  ಎಂದು ಹೇಳಲಾಗಿದೆ.

ಒಂದು ಸಾವಿರ ರುಪಾಯಿಯ ಹೊಸನೋಟು ಅಂಧರಿಗೆ ಗುರುತಿಸಲು ಸಾಧ್ಯವಾಗುವಂತೆ ಬ್ರೈಲ್‌ಸ್ನೇಹಿ ಆಗಿರಲಿವೆ. 2,000 ಮುಖಬೆಲೆಯ ನೋಟುಗಳಿಗೆ ಚಿಲ್ಲರೆ ದೊರೆಯುವುದು ಕಷ್ಟವಾಗುತ್ತಿದೆ. ಹಾಗಾಗಿ ರು.1,000 ದ ನೋಟುಗಳ ಮುದ್ರಣ ಕಾರ್ಯವನ್ನು ತ್ವರಿತಗೊಳಿಸಲಾಗಿದೆ ಎನ್ನಲಾಗಿದೆ.

ಎಟಿಎಂನಿಂದ ದಿನಕ್ಕೆ ಪಡೆಯಬಹುದಾದ ಗರಿಷ್ಠ ಮೊತ್ತವನ್ನು ಇತ್ತೀಚೆಗೆ ರು.4,500ರಿಂದ 10 ಸಾವಿರಕ್ಕೆ ಏರಿಸಲಾಗಿತ್ತು. ಫೆಬ್ರವರಿ ತಿಂಗಳಲ್ಲಿ ವಿತ್ ಡ್ರಾ ಮಿತಿಯನ್ನು ರದ್ಧುಗೊಳಿಸಲಾಗುವುದು ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.