ಸಂಪೂರ್ಣ ಗೋಹತ್ಯೆ ನಿಷೇಧಕ್ಕೆ ಸುಪ್ರೀಂಕೋರ್ಟ್ ನಕಾರ
ದೇಶದ ಪ್ರತೀ ರಾಜ್ಯದಲ್ಲೂ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ...

ನವದೆಹಲಿ: ದೇಶದ ಪ್ರತೀ ರಾಜ್ಯದಲ್ಲೂ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾ ಮಾಡಿದೆ.
ಭಾರತದಲ್ಲಿರು ಕೆಲವು ರಾಜ್ಯಗಳಲ್ಲಿ ಮಾತ್ರ ಗೋಹತ್ಯೆಗೆ ನಿಷೇಧವಿದ್ದು, ಗೋಹತ್ಯೆ ನಿಷೇಧವಿರುವ ರಾಜ್ಯಗಳಿಂದ ಇತರ ರಾಜ್ಯಗಳಿಗೆ ಅಕ್ರಮವಾಗಿ ಗೋ ಸಾಗಾಣಿಕೆ ಮಾಡಲಾಗುತ್ತಿದೆ. ಹೀಗಾಗಿ ಇದನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕಿದ್ದು, ದೇಶದ ಎಲ್ಲಾ ರಾಜ್ಯಗಳಲ್ಲಿ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಈ ಹಿಂದೆ ಸಲ್ಲಿಸಲಾಗಿತ್ತು.
ಅರ್ಜಿ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಗೋವು ಸಾಗಾಣಿಕೆ ಮತ್ತು ಅದಕ್ಕೆ ಸಂಬಂಧಪಟ್ಟಂತಹ ನಿಯಮಗಳನ್ನು ರೂಪಿಸುವಂತೆ ಈಗಾಗಲೇ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೇದವೆಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


