ದೇಶ

ರೈತರೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಪ್ರಶ್ನೆ

ದೇಶದಾದ್ಯಂತ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕೆಂಡಕಾರಿರುವ ಸುಪ್ರೀಂಕೋರ್ಟ್, ರೈತರೇಕೆ ಆತ್ಮಹತ್ಯೆ ಕುರಿತಂತೆ ಕೂಡಲೇ ಸ್ಪಷ್ಟನೆ ನೀಡುವಂತೆ ಶುಕ್ರವಾರ...

ರೈತರೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಪ್ರಶ್ನೆ
ಸುಪ್ರೀಂಕೋರ್ಟ್
Published On :

ನವದೆಹಲಿ: ದೇಶದಾದ್ಯಂತ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕೆಂಡಕಾರಿರುವ ಸುಪ್ರೀಂಕೋರ್ಟ್, ರೈತರೇಕೆ ಆತ್ಮಹತ್ಯೆ ಕುರಿತಂತೆ ಕೂಡಲೇ ಸ್ಪಷ್ಟನೆ ನೀಡುವಂತೆ ಶುಕ್ರವಾರ ಸೂಚನೆ ನೀಡಿದೆ.

ಹೆಚ್ಚಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಸಂಬಂಧ ಎನ್'ಜಿಒ ಸಲ್ಲಿಸಿದ್ದ ಅರ್ಜಿ ಸಂಬಂಧ ಇಂದು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಾಧೀಶ ಜೆಎಸ್. ಖೆಹರ್ ಮತ್ತು ನ್ಯಾಯಾಧೀಶ ಎನ್.ವಿ. ರಾಮಣ್ಣ ಅವರಿದ್ದ ಪೀಠ, ರೈತರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಪ್ರಶ್ನಿಸಿದೆ. ಅಲ್ಲದೆ, ಈ ಬಗ್ಗೆ ಪರಿಶೀಲನೆ ನಡೆಸಿ 4 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಆದೇಶಿಸಿದೆ ಎಂದು ತಿಳಿದುಬಂದಿದೆ.

ದೇಶದಾದ್ಯಂತ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ಕೂಡಲೇ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.