ದೇಶ

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಹಿಮಪಾತ: ಐವರು ಯೋಧರು ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಕರ್ತವ್ಯನಿರತ ಐವರು ಯೋಧರು ನಾಪತ್ತೆಯಾಗಿರುವುದಾಗಿ ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಹಿಮಪಾತ: ಐವರು ಯೋಧರು ನಾಪತ್ತೆ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಕರ್ತವ್ಯನಿರತ ಐವರು ಯೋಧರು ನಾಪತ್ತೆಯಾಗಿರುವುದಾಗಿ ಶನಿವಾರ ತಿಳಿದುಬಂದಿದೆ.

ಕಣಿವೆ ರಾಜ್ಯಗಳಾದ ಕುಪ್ವಾರ, ಬಂಡಿಪೋರ, ಬಾರಾಮುಲ್ಲಾ, ಗಂದೇರ್ಬಾಲ್, ಕುಲ್ಗಾಂ, ಕಾರ್ಗಿಲ್ ಜಿಲ್ಲೆ ಸೇರಿದೆ ಕಾಶ್ಮೀರದ ಹಲವೆಗೆ ಮುಂದಿನ 24 ಗಂಟೆಯೊಳಗೆ ಭಾರೀ ಪ್ರಮಾಣದ ಹಿಮಪಾತವಾಗಲಿದ್ದು, ಅಪಾಯಕಾರಿ ಹಿಮ ಕುಸಿತವಾಗಲಿದೆ ಇಂದು ಬೆಳಿಗ್ಗೆಯಷ್ಟೇ ಹಿಮಪಾತ ಮತ್ತು ಹಿಮಕುಸಿತ ಅಧ್ಯಯನ ಸಂಸ್ಥೆ ಎಚ್ಚರಿಕೆ ನೀಡಿತ್ತು.

ಇದರಂತೆ ಕುಪ್ವಾರದಲ್ಲಿ ಭಾರೀ ಹಿಮಪಾತವೊಂದು ಸಂಭವಿಸಿದ್ದು, ಈ ವೇಳೆ ಕರ್ತವ್ಯನಿರತದಲ್ಲಿದ್ದ ಐವರು ಯೋಧರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದೆ. ನಾಪತ್ತೆಯಾಗಿದ್ದ ಯೋಧರಿಗಾಗಿ ಅಧಿಕಾರಿಗಳು ತೀವ್ರ ಶೋಧನಾ ಕಾರ್ಯ ಆರಂಭಿಸಿದ್ದಾರೆ.

ಕಳೆದೊಂದು ವಾರದಿಂದ ಜಮ್ಮು ಮತ್ತು ಕಾಶ್ಮೀರದ ಹವಮಾನದಲ್ಲಿ ಭಾರಿ ಏರುಪೇರಾಗುತ್ತಿದ್ದು, ಭಾರಿ ಪ್ರಮಾಣದ ಹಿಮಪಾತವಾಗುತ್ತಿದೆ. ತಾಪಮಾನ ಕುಸಿತ ಹಾಗೂ ಹಿಮಪಾತಗಳಿಂದಾಗಿ ಗಡಿಯಲ್ಲಿ ಸೈನಿಕರು ಕರ್ತವ್ಯ  ನಿರ್ವಹಿಸುವುದೇ ದುಸ್ತರವಾಗಿ ಪರಿಣಮಿಸಿದೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ ಪರಿಣಾಮ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 16 ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.