ದೇಶ

ಕುಂದುಕೊರತೆ ಹೇಳಿಕೊಳ್ಳಲು ಯೋಧರಿಗೆ ವಾಟ್ಸ್'ಆ್ಯಪ್ ಸಂಖ್ಯೆ ನೀಡಿದ ಸೇನೆ

ಭಾರತೀಯ ಯೋಧರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ತೋಡಿಕೊಳ್ಳುತ್ತಿರುವ ಬೆನ್ನಲ್ಲೇ ತೀವ್ರ ಮುಜುಗರಕ್ಕೊಳಗಾಗಿದ್ದ ಸೇನಾಧಿಕಾರಿಗಳು ಇದೀಗ ಯೋಧರು ತಮ್ಮ ಸಮಸ್ಯೆಗಳನ್ನು ನೇರವಾಗಿ ತಮ್ಮ ಬಳಿಯೇ ಹೇಳಿಕೊಳ್ಳುವಂತೆ ತಿಳಿಸಿ ವಾಟ್ಸ್ ಆ್ಯಪ್ ನೀಡಿದ್ದಾರೆಂದು ತಿಳಿದುಬಂದಿದೆ...

ಕುಂದುಕೊರತೆ ಹೇಳಿಕೊಳ್ಳಲು ಯೋಧರಿಗೆ ವಾಟ್ಸ್'ಆ್ಯಪ್ ಸಂಖ್ಯೆ ನೀಡಿದ ಸೇನೆ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತೀಯ ಯೋಧರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ತೋಡಿಕೊಳ್ಳುತ್ತಿರುವ ಬೆನ್ನಲ್ಲೇ ತೀವ್ರ ಮುಜುಗರಕ್ಕೊಳಗಾಗಿದ್ದ ಸೇನಾಧಿಕಾರಿಗಳು ಇದೀಗ ಯೋಧರು ತಮ್ಮ ಸಮಸ್ಯೆಗಳನ್ನು ನೇರವಾಗಿ ತಮ್ಮ ಬಳಿಯೇ ಹೇಳಿಕೊಳ್ಳುವಂತೆ ತಿಳಿಸಿ ವಾಟ್ಸ್ ಆ್ಯಪ್ ನೀಡಿದ್ದಾರೆಂದು ತಿಳಿದುಬಂದಿದೆ.

+91 9643300008 ಸಂಖ್ಯೆಯನ್ನು ಯೋಧರಿಗೆ ನೀಡಲಾಗಿದ್ದು, ಈ ವಾಟ್ಸ್ ಆ್ಯಪ್ ಸಂಖ್ಯೆಯ ಮೂಲಕ ಯೋಧರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಬಳಿ ಹೇಳಿಕೊಳ್ಳಬಹುದಾಗಿದೆ ಎಂದು ಸೇನೆ ತಿಳಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಸೇನೆಯ ಅಧಿಕಾರಿಗಳು, ಸೇನೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾದರೂ ಅವುಗಳನ್ನು ನಿವಾರಿಸಲು ಪ್ರತ್ಯೇಕವಾದ ವ್ಯವಸ್ಥೆಯಿದೆ. ಯೋಧರಿಗೆ ಈ ವೇದಿಕೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಸಾಧ್ಯವಾಗದಿದ್ದರೆ, ವಾಟ್ಸ್ ಆ್ಯಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ನೇರವಾಗಿ ಸೇನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.

ಆದರೆ, ಇದಕ್ಕೂ ಕೆಲ ಯೋಧರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ವಾಟ್ಸ್ ಆ್ಯಪ್ ಗಳಲ್ಲಿ ಬರುವ ಎಲ್ಲಾ ಸಂದೇಶಗಳನ್ನು ನೋಡಲು ಸಾಧ್ಯವಾಗುವಿದಿಲ್ಲ. ಈಗಾಗಲೇ ಸಾಮಾನ್ಯವಾಗಿ ಸೇನೆಯ ವಾಟ್ಸ್ ಆ್ಯಪ್ ನಂಬರ್ ಇದೆ. ಆದರೆ, ಇದರಿಂದ ಯಾವುದೇ ಪ್ರಯೋಜನಗಳಾಗಿಲ್ಲ. ಸಂದೇಶಗಳನ್ನು ಯಾರೂ ಪರಿಶೀಲಿಸುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಬಿಎಸ್ ಎಫ್ ನ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಗಡಿಯಲ್ಲಿ ನಿಂತೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡಿದ್ದರು. ತಮಗೆ ನೀಡುತ್ತಿರುವ ಆಹಾರ ಕಳಪೆ ಮಟ್ಟದಾಗಿದೆ ಎಂದು  ಹೇಳಿಕೊಂಡಿದ್ದರು. ಇದಾದ ಬಳಿಕ ಕೆಲ ಸೈನಿಕರು ಸರಣಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಟ್ಟಿದ್ದರು. ಇದರಿಂದ ಸೇನೆ ಹಾಗೂ ಕೇಂದ್ರ ಸರ್ಕಾರ ಮುಜುಗರಕ್ಕೀಡಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.