ಜಮ್ಮು-ಕಾಶ್ಮೀರ ಹಿಮಪಾತದಲ್ಲಿ ಹುತಾತ್ಮರಾದ ಯೋಧರಿಗೆ ಭಾರತೀಯ ಸೇನೆ ಶ್ರದ್ಧಾಂಜಲಿ
ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ನಲ್ಲಿ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾದ ಯೋಧರಿಗೆ ಭಾನುವಾರ ಭಾರತೀಯ ಸೇನೆ ಶ್ರದ್ಧಾಂಜಲಿ ಸಲ್ಲಿಸಿದೆ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ನಲ್ಲಿ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾದ ಯೋಧರಿಗೆ ಭಾನುವಾರ ಭಾರತೀಯ ಸೇನೆ ಶ್ರದ್ಧಾಂಜಲಿ ಸಲ್ಲಿಸಿದೆ.
ಕೆಲ ದಿನಗಳ ಹಿಂದೆ ಕಾಶ್ಮೀರದ ಸೋನಾಮಾರ್ಗ್ ಸಮೀಪದ ಸೇನಾ ಕ್ಯಾಂಬ್ ಬಳಿ ಸಂಭವಿಸಿದ ಹಿಮಪಾತದಿಂದಾಗಿ ಸೇನಾಧಿಕಾರಿ ಮೇಜರ್ ಅಮಿತ್ ಸಾಗರ್ ಅವರು ಹುತಾತ್ಮರಾಗಿದ್ದರು. ಅಮಿತ್ ಸಾಗರ್ ಅವರ ಜೊತೆಗೆ ಐವರು ಯೋಧರು ಕೂಡ ಹುತಾತ್ಮರಾಗಿದ್ದರು.
ಹುತಾತ್ಮರಾದ ಮೇಜರ್ ಅಮಿತ್ ಸಾಗರ್ ಅವರಿಗೆ ಇಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.
ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಪಿನ್ ರಾವತ್ ಅವರು, ಹಿಮಪಾತ ಸಂಭವ ಕುರಿತಂತ ನಕ್ಷೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಮೂಲಕ ಯೋಧರು ಸಿದ್ಧತೆಗಳೊಂದಿಗೆ ಕರ್ತವ್ಯನಿರ್ವಹಿಸಲು ಸಹಾಯಕವಾಗಲಿದೆ. ಹಿಮಪಾತದಲ್ಲಿ ಹುತಾತ್ಮರಾದ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ ಎಂಬ ಭರವಸೆಯನ್ನು ಈ ಮೂಲಕ ನಾನು ನೀಡುತ್ತಿದ್ದೇನೆಂದು ಹೇಳಿದ್ದಾರೆ.
ಕಳೆದೊಂದು ವಾರದಿಂದ ಜಮ್ಮು ಮತ್ತು ಕಾಶ್ಮೀರದ ಹವಮಾನದಲ್ಲಿ ಭಾರಿ ಏರುಪೇರಾಗುತ್ತಿದ್ದು, ಭಾರಿ ಪ್ರಮಾಣದ ಹಿಮಪಾತವಾಗುತ್ತಿದೆ. ತಾಪಮಾನ ಕುಸಿತ ಹಾಗೂ ಹಿಮಪಾತಗಳಿಂದಾಗಿ ಗಡಿಯಲ್ಲಿ ಸೈನಿಕರು ಕರ್ತವ್ಯ ನಿರ್ವಹಿಸುವುದೇ ದುಸ್ತರವಾಗಿ ಪರಿಣಮಿಸಿದೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ ಪರಿಣಾಮ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 16 ಯೋಧರು ಹುತಾತ್ಮರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


