ದೇಶ

ಬನ್ಸಾಲಿ ಮೇಲಿನ ಹಲ್ಲೆಗೆ ಬಿಜೆಪಿ ಪ್ರಚೋದನೆ: ದಿಗ್ವಿಜಯ್ ಸಿಂಗ್ ಆರೋಪ

ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮೇಲಿನ ದಾಳಿಗೆ ಬಿಜೆಪಿ ಪ್ರಚೋದನೆ ನೀದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಬನ್ಸಾಲಿ ಮೇಲಿನ ಹಲ್ಲೆಗೆ ಬಿಜೆಪಿ ಪ್ರಚೋದನೆ: ದಿಗ್ವಿಜಯ್ ಸಿಂಗ್ ಆರೋಪ
Published On :
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮೇಲಿನ ದಾಳಿಗೆ ಬಿಜೆಪಿ ಪ್ರಚೋದನೆ ನೀದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ. 
ಇಂತಹ ಘಟನೆಗಳೇಕೆ ಕೇವಲ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ನಡೆಯುತ್ತಿದೆ, ರಾಜಸ್ಥಾನ ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಪ್ರಶ್ನಿಸಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋದಲ್ಲಿ ಪೊಲೀಸರು ಇದ್ದದ್ದು ಕಂಡುಬಂದಿಲ್ಲ. ಸಾಮಾನ್ಯವಾಗಿ ಯಾವುದೇ ಚಿತ್ರೀಕರಣ ಪ್ರದೇಶದಲ್ಲೂ ಪೊಲೀಸರು ಇರುತ್ತಾರೆ ಎಂದಿದ್ದಾರೆ. 
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸುತ್ತಿರುವ ಪದ್ಮಾವತಿ ಚಿತ್ರದ ಚಿತ್ರೀಕರಣ ರಾಜಸ್ಥಾನದ್ಲಲಿ ನಡೆಯುತ್ತಿರಬೇಕಾದರೆ, ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ.  ರಜಪೂತ್ ರಾಣಿಯನ್ನು ಚಿತ್ರದಲ್ಲಿ ನಿಕೃಷ್ಟವಾಗಿ ತೋರಿಸಲಾಗಿದೆ ಎಂದು ರಜ್‌'ಪೂತ್ ಕರ್ಣಿ ಸೇನಾದ ಪ್ರತಿಭಟನಾಕಾರರು ಬನ್ಸಾಲಿ ಅವರ ಕಪಾಳಮೋಕ್ಷ ಮಾಡಿದ್ದರು. ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಕಪಾಳ ಮೋಕ್ಷ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.