ಮುಸ್ಲಿಂ ಪ್ರಜೆಗಳಿಗೆ ನಿರ್ಬಂಧದ ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ!
ಇಸ್ಲಾಮಿಕ್ ರಾಷ್ಟ್ರಗಳಿಂದ ಅಮೆರಿಕಾಗೆ ವಲಸೆ ಬರುವವರಿಗೆ ನಿರ್ಬಂಧ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ಅಮೆರಿಕಾದ ಫೆಡರಲ್ ನ್ಯಾಯಾಧೀಶರೊಬ್ಬರು ತಡೆ ನೀಡಿದ್ದಾರೆ.

Published On :
ನ್ಯೂಯಾರ್ಕ್: ಇಸ್ಲಾಮಿಕ್ ರಾಷ್ಟ್ರಗಳಿಂದ ಅಮೆರಿಕಾಗೆ ವಲಸೆ ಬರುವವರಿಗೆ ನಿರ್ಬಂಧ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ಅಮೆರಿಕಾದ ಫೆಡರಲ್ ನ್ಯಾಯಾಧೀಶರೊಬ್ಬರು ತಡೆ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರ ಆದೇಶದ ನಂತರ ಅಮೆರಿಕಾಗೆ ಬಂದಿದ್ದ ನಿರಾಶ್ರಿತರು, ಪ್ರಯಾಣಿಕರು ಅಮೆರಿಕಾದ ವಿಮಾನ ನಿಲ್ದಾಣದಲ್ಲೇ ಸಿಲುಕಿಕೊಳ್ಳಬೇಕಾದ ಸ್ಥಿತಿ ಎದುರಾಗಿತ್ತು. ಈ ಬೆಳೆವಣಿಗೆಗಳ ನಂತರ ಅಮೆರಿಕದ ಫೆಡರಲ್ ಕೋರ್ಟ್ ನ ನ್ಯಾಯಾಧೀಶರು ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ತಡೆ ನೀಡಿದ್ದಾರೆ.
ಕೋರ್ಟ್ ಟ್ರಂಪ್ ಆದೇಶಕ್ಕೆ ತಡೆ ನೀಡುತ್ತಿದ್ದಂತೆಯೇ ಅಮೆರಿಕ ಸಿವಿಲ್ ಲಿಬರ್ಟೀಸ್ ಯೂನಿಯನ್(ಎಸಿಎಲ್ ಯು) ಸಂಘಟನೆ ವಿಜಯೋತ್ಸವ ಆಚರಿಸಿದೆ. ಡೊನಾಲ್ಡ್ ಟ್ರಂಪ್ ಆದೇಶದ ವಿರುದ್ಧ ಇದೇ ಅಮೆರಿಕ ಸಿವಿಲ್ ಲಿಬರ್ಟೀಸ್ ಯೂನಿಯನ್ ಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಸಾಂವಿಧಾನಿಕ ವಿರೋಧಿ ನಿರ್ಧಾರಗಳ, ನೀತಿಗಳಿಗೆ ಅಂಕುಶ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯ ಕಾರ್ಯನಿರ್ವಹಿಸಿದೆ ಎಂದು ಅಮೆರಿಕಾದ ಸಿವಿಲ್ ಲಿಬರ್ಟೀಸ್ ಯೂನಿಯನ್ ಸಂತಸ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


