ಪ್ರಿಯಾಂಕ ಗಾಂಧಿ ಪಕ್ಷದ ಆಸ್ತಿ: ರಾಹುಲ್ ಗಾಂಧಿ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರದ ಬಗ್ಗೆ ಮಾತನಾಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಅಮೂಲ್ಯ ಆಸ್ತಿ ಇದ್ದಂತೆ ಎಂದು ಬಣ್ಣಿಸಿದ್ದಾರೆ.

Published On :
ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರದ ಬಗ್ಗೆ ಮಾತನಾಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಅಮೂಲ್ಯ ಆಸ್ತಿ ಇದ್ದಂತೆ ಎಂದು ಬಣ್ಣಿಸಿದ್ದಾರೆ.
ನಾನು ಪ್ರಿಯಾಂಕ ಗಾಂಧಿಗೆ ಹಾಗೂ ಪ್ರಿಯಾಂಕ ಗಾಂಧಿ ನನಗೆ ಪರಸ್ಪರ ಸಹಕಾರಿಯಾಗಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಾರೋ ಇಲ್ಲವೋ ಅದು ಅವರ ಆಯ್ಕೆ, ಆದರೆ ಅವರಂತೂ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿ ಇದ್ದಂತೆ ಎಂದು ಹೇಳಿದ್ದಾರೆ.
ಫೆ.11 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಲಾಯಂ ಸಿಂಗ್ ಯಾದವ್, ಸೋನಿಯಾ ಗಾಂಧಿ ಪ್ರಚಾರ ಮಾಡಲಿದ್ದಾರಾ ಎಂಬ ಪ್ರಶ್ನೆಗೆ " ಈಗಲೇ ಏನನ್ನೂ ಹೇಳುವುದಿಲ್ಲ" ಎಂದಷ್ಟೇ ತಿಳಿಸಿದ್ದಾರೆ. ಇದೇ ವೇಳೆ ಮಾಯಾವತಿ ನೇತೃತ್ವದ ಬಿಎಸ್ ಪಿ ಬಗ್ಗೆಯೂ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಮಾಯಾವತಿ ಅವರ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ. ರಾಜ್ಯದಲ್ಲಿ ಆಡಳಿತ ನಡೆಸಿದಾಗ ಬಿಎಸ್ ಪಿ ಯಿಂದ ಕೆಲವು ತಪ್ಪುಗಳಾಗಿದ್ದರೂ ಅವರ ಬಗ್ಗೆ ಗೌರವವಿದೆ ಎಂದು ಹೇಳಿದ್ದಾರೆ.
ರಾಷ್ಟ್ರಕ್ಕೆ ಅಪಾಯವಿರುವುದು ಬಿಜೆಪಿ ಸಿದ್ಧಾಂತಗಳಿಂದಲೇ ಹೊರತು ಬಿಎಸ್ ಪಿ ಯಿಂದ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressRahul Gandhiರಾಹುಲ್ ಗಾಂಧಿPriyanka Gandhi Vadraಉತ್ತರ ಪ್ರದೇಶ ಚುನಾವಣೆ-2017Uttar Pradesh elections-2017ಪ್ರಿಯಾಂಕ ಗಾಂಧಿ ವಾಧ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


