ದೇಶ

ಕಾಶ್ಮೀರದಲ್ಲಿ ಹಿಮಪಾತ: 2 ದಿನಗಳ ಹಿಂದೆ ರಕ್ಷಿಸಲಾಗಿದ್ದ ಐವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಮಚಿಲ್ ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಐವರು ಯೋಧರನ್ನು ರಕ್ಷಿಸಲಾಗಿತ್ತು....

ಕಾಶ್ಮೀರದಲ್ಲಿ ಹಿಮಪಾತ: 2 ದಿನಗಳ ಹಿಂದೆ ರಕ್ಷಿಸಲಾಗಿದ್ದ ಐವರು ಯೋಧರು ಹುತಾತ್ಮ
ಸಾಂದರ್ಭಿಕ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಐವರು ಯೋಧರನ್ನು ರಕ್ಷಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಐವರು ಸೋಮವಾರ ಹುತಾತ್ಮರಾಗಿದ್ದಾರೆ.
ಜನವರಿ 28ರಂದು ಉತ್ತರ ಕಾಶ್ಮೀರದ ಮಚಿಲ್ ನಲ್ಲಿ ಐವರು ಯೋಧರು ಹಿಮದೊಳಗೆ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ಆರಂಭಿಸಿದ ಸೇನೆಯ ರಕ್ಷಣಾ  ತಂಡ, ವಿಶೇಷ ಉಪಕರಣಗಳನ್ನು ಬಳಸಿ ಅಹಿತಕರ ವಾಕತಾವರಣ ಹಾಗೂ ಪದೇ ಪದೇ ಉಂಟಾಗುತ್ತಿದ್ದ ಹಿಮಪಾತದ ನಡುವೆಯೂ ಮಂಜುಗಡ್ಡೆ ಅಡಿ ಸಿಲುಕಿದ್ದ ಸೈನಿಕರನ್ನು ಯಶಸ್ವಿಯಾಗಿ ರಕ್ಷಿಸಿದ್ದರು. 
ಗಂಭೀರವಾಗಿ ಗಾಯಗೊಂಡಿದ್ದ ಐವರು ಯೋಧರನ್ನು ಇಂದು ಶ್ರೀನಗರದ ಸೇನಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಎಲ್ಲಾ ಐದು ಯೋಧರಿಗೂ ಲಘು ಉಷ್ಣತೆಯ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
ಕಳೆದ ಎರಡು ವಾರಗಳಿಂದ ಜಮ್ಮು ಮತ್ತು ಕಾಶ್ಮೀರದ ಹವಮಾನದಲ್ಲಿ ಭಾರಿ ಏರುಪೇರಾಗುತ್ತಿದ್ದು, ಭಾರಿ ಪ್ರಮಾಣದ ಹಿಮಪಾತವಾಗುತ್ತಿದೆ. ತಾಪಮಾನ ಕುಸಿತ ಹಾಗೂ ಹಿಮಪಾತಗಳಿಂದಾಗಿ ಗಡಿಯಲ್ಲಿ ಸೈನಿಕರು ಕರ್ತವ್ಯ  ನಿರ್ವಹಿಸುವುದೇ ದುಸ್ತರವಾಗಿ ಪರಿಣಮಿಸಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ ಪರಿಣಾಮ ಇದವರೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 21 ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.