ದೇಶ

ಭಾರತದ ಆರ್ಥಿಕತೆ ಹಾದಿ ತಪ್ಪಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಭಾರತದ ಆರ್ಥಿಕತೆ ಹಾದಿ ತಪ್ಪಿದೆ. ಆರ್ಥಿಕ ಬೆಳವಣಿಗೆ ದರ(ಜಿಡಿಪಿ) ಸಹ ಕುಸಿದಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ...

ಭಾರತದ ಆರ್ಥಿಕತೆ ಹಾದಿ ತಪ್ಪಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಚಿದಂಬರಂ-ಮನಮೋಹನ್ ಸಿಂಗ್
Published On :
ನವದೆಹಲಿ: ಭಾರತದ ಆರ್ಥಿಕತೆ ಹಾದಿ ತಪ್ಪಿದೆ. ಆರ್ಥಿಕ ಬೆಳವಣಿಗೆ ದರ(ಜಿಡಿಪಿ) ಸಹ ಕುಸಿದಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. 
ಫೆಬ್ರವರಿ 1ರಂದು ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದ್ದು ಇದಕ್ಕೂ ಮುನ್ನ ರಿಯಲ್ ಸ್ಟೇಟ್ ಆಫ್ ದಿ ಎಕಾನಾಮಿ 2015 ಡಾಕ್ಯುಮೆಂಟ್ ಬಿಡುಗಡೆ ಮಾಡಿ ಮಾತನಾಡಿದ ಮನಮೋಹನ್ ಸಿಂಗ್ ಅವರು. ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಆರ್ಥಿಕತೆ ಸರಿಯಾದ ಹಾದಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ. 
ಭಾರತದ ಜಿಡಿಪಿ ದರ ಶೇಖಡ 7.6 ರಿಂದ ಶೇಖಡ 6.6 ರಷ್ಟಾಗಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಸೇರಿದಂತೆ ಇನ್ನು ಹಲವು ರೇಟಿಂಗ್ ಸಂಸ್ಥೆಗಳು ಇದನ್ನು ಸ್ಪಷ್ಟಪಡಿಸಿವೆ ಎಂದರು. 
ಇನ್ನು ಜಂಟಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸಹ ಭಾರತದ ಆರ್ಥಿಕತೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ 10 ವರ್ಷಗಳ ಆಡಳಿತಾವಧಿಯಲ್ಲಿ ಶೇಖಡ 7 ರಷ್ಟು ಜಿಡಿಪಿ ದರವನ್ನು ನಿಭಾಯಿಸಿಕೊಂಡು ಬಂದಿತ್ತು. ಆದರೆ ಈಗಿನ ಕೇಂದ್ರ ಸರ್ಕಾರ ತನ್ನ ಎರಡು ವರ್ಷಗಳ ಕಾಲಾವಧಿಯಲ್ಲೇ ಜಿಡಿಪಿ ದರ ಕುಸಿದಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.