ದೇಶ

ನಾನು ಮತ್ತೆ ಗೆದ್ದರೆ ಕೈರಾನದಲ್ಲಿ ಕರ್ಫ್ಯೂ ಕಾಯಂ: ಬಿಜೆಪಿ ಶಾಸಕ ಸುರೇಶ್ ರಾಣಾ

ನಾನು ಮತ್ತೆ ಉತ್ತರ ಪ್ರದೇಶ ವಿಧಾಸಭೆಗೆ ಆಯ್ಕೆಯಾದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸುವುದಾಗಿ..

ನಾನು ಮತ್ತೆ ಗೆದ್ದರೆ ಕೈರಾನದಲ್ಲಿ ಕರ್ಫ್ಯೂ ಕಾಯಂ: ಬಿಜೆಪಿ ಶಾಸಕ ಸುರೇಶ್ ರಾಣಾ
ಸುರೇಶ್ ರಾಣಾ
Published On :
ಮುಜಾಫರನಗರ್: ನಾನು ಮತ್ತೆ ಉತ್ತರ ಪ್ರದೇಶ ವಿಧಾಸಭೆಗೆ ಆಯ್ಕೆಯಾದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸುವುದಾಗಿ ಬಿಜೆಪಿ ಶಾಸಕ ಸುರೇಶ್ ರಾಣಾ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
2013ರ ಮುಜಾಫರನಗರ್ ಗಲಭೆ ಪ್ರಕರಣದ ಆರೋಪಿಯಾಗಿರುವ ರಾಣಾ, ಶ್ಯಾಮ್ಲಿ ಜಿಲ್ಲೆಯ ಥಾಣ ಭವನ್ ವಿಧಾನಸಭಾ ಕ್ಷೇತ್ರದಿಂದ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ತಮ್ಮ ಕ್ಷೇತ್ರದಲ್ಲಿ ಶನಿವಾರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಣಾ, ಒಂದು ವೇಳೆ ಚುನಾವಣೆಯಲ್ಲಿ ನಾನು ಮತ್ತೆ ಗೆದ್ದು ಬಂದರೆ ಕೈರಾನ, ದಿಯೋಬಂದ್ ಮತ್ತು ಮೊರ್ದಾಬಾದ್ ನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದಿದ್ದಾರೆ.
ರಾಣಾ ಅವರ ಈ ವಿವಾದಾತ್ಮಕ ಹೇಳಿಕೆಗೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 
ಇನ್ನು ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಣಾ, ನಾನು ರಾಜ್ಯದಲ್ಲಿ ಭಯೋತ್ಪಾದನೆಯನ್ನು ಹರಡುತ್ತಿರುವ ಗೂಂಡಾಗಳ ಬಗ್ಗೆ ಹೇಳಿದ್ದೇನೆ. ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಬೇಡಿ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.