ಉತ್ತರಪ್ರದೇಶ ಮತ್ತೊಂದು ಕಾಶ್ಮೀರವಾಗಿ ಪರಿವರ್ತನೆಗೊಳ್ಳಲಿದೆ: ಯೋಗಿ ಆದಿತ್ಯಾನಾಥ್
ಸರ್ಕಾರ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳದೇ ಹೋದರೆ ಉತ್ತರಪ್ರದೇಶ ಮತ್ತೊಂದು ಕಾಶ್ಮೀರವಾಗಿ ನಿರ್ಮಾಣವಾಗಲಿದೆ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ್ ಅವರು ಹೇಳಿದ್ದಾರೆ...

ನವದೆಹಲಿ: ಸರ್ಕಾರ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳದೇ ಹೋದರೆ ಉತ್ತರಪ್ರದೇಶ ಮತ್ತೊಂದು ಕಾಶ್ಮೀರವಾಗಿ ನಿರ್ಮಾಣವಾಗಲಿದೆ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ್ ಅವರು ಹೇಳಿದ್ದಾರೆ.
ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಉತ್ತರಪ್ರದೇಶದಲ್ಲಿರುವ ಹಿಂದೂಗಳಿಗೆ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳು ರಕ್ಷಣೆ ನೀಡುವಲ್ಲಿ ವಿಫಲವಾಗುತ್ತಿದ್ದಾರೆಂದು ಆರೋಪಿಸಿದ್ದಾರೆ.
ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಗಲಭೆ, ಘರ್ಷಣೆಗಳಿಂದ ರಕ್ಷಣೆ ಸಿಗದೆ ಇಲ್ಲಿನ ಜನತೆ ವಲಸೆ ಹೋಗುತ್ತಿದ್ದಾರೆ. ಸರ್ಕಾರ ಕೂಡಲೇ ಸೂಕ್ತ ರೀತಿಯ ಕ್ರಮ ಕೈಗೊಳ್ಳದೇ ಹೋದರೆ ಉತ್ತರಪ್ರದೇಶ ಕೂಡ ಮತ್ತೊಂದು ಕಾಶ್ಮೀರವಾಗಿ ಪರಿವರ್ತನೆಗೊಳ್ಳಲಿದೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಹಪುರ್ ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಯೋಗಿ ಆದಿತ್ಯಾನಾಥ್ ಅವರು, ಅಂದು ಕಾಶ್ಮೀರಿ ಪಂಡಿತರ ಮೇಲೆ ದೌರ್ಜನ್ಯಲಾಗಿತ್ತು. ದೌರ್ಜನ್ಯಕ್ಕೆ ಸಹಿಸಲಾಗದೆ, ಕಾಶ್ಮೀರಿ ಪಂಡಿತರು ಕಾಶ್ಮೀರವನ್ನು ತೊರೆದಿದ್ದರು. ಇಂದು ಉತ್ತರಪ್ರದೇಶದಲ್ಲಿಯೂ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಸುತ್ತಿದೆ. ಉತ್ತರಪ್ರದೇಶ ಕೂಡ ಮತ್ತೊಂದು ಕಾಶ್ಮೀರವಾಗಿ ಪರಿವರ್ತನೆಗೊಳ್ಳುತ್ತಿದೆ. ಪ್ರಮುಖವಾಗಿ ಮುಜಾಫರ್ ನಗರ, ಬಾಘ್ಪತ್, ಮೀರುತ್ ಮತ್ತು ಘಜಿಯಾಬಾದ್ ನಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ಹೆಚ್ಚಾಗತೊಡಗಿವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


