ಉತ್ತರ ಪ್ರದೇಶ ಚುನಾವಣೆ: 23 ಕೋಟಿ ಆಸ್ತಿಯ ಒಡತಿ ಅಪರ್ಣಾ ಯಾದವ್ ಶ್ರೀಮಂತ ಅಭ್ಯರ್ಥಿ!
ಅಪರ್ಣಾ ಯಾದವ್ 23 ಕೋಟಿ ಆಸ್ತಿಯನ್ನು ಹೊಂದಿದ್ದು ಚುನಾವಣಾ ಕಣದಲ್ಲಿರುವ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

Published On :
ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಲಖನೌ ಕಂಟೋನ್ಮೆಂಟ್ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ 23 ಕೋಟಿ ಆಸ್ತಿಯನ್ನು ಹೊಂದಿದ್ದು ಚುನಾವಣಾ ಕಣದಲ್ಲಿರುವ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಬಿಜೆಪಿಯ ಅಭ್ಯರ್ಥಿ ರೀಟಾ ಬಹುಗುಣ ಅವರ ವಿರುದ್ಧ ಸ್ಪರ್ಧಿಸಿರುವ ಅಪರ್ಣಾ ಯಾದವ್, ಆಸ್ತಿ ವಿವರಕ್ಕೆ ಸಂಬಂಧಿಸಿದಂತೆ ಜ.30 ರಂದು ಪ್ರಮಾಣ ಪತ್ರ ಸಲ್ಲಿಸಿದ್ದು, ತಮ್ಮ ಪತಿ ಪ್ರತೀಕ್ ಯಾದವ್ ಬಳಿ 5.23 ಕೋಟಿ ರೂಪಾಯಿ ಮೌಲ್ಯದ ಲ್ಯಾಂಬರ್ಗಿನಿ ಕಾರು ಸೇರಿದಂತೆ ಇಬ್ಬರ ಬಳಿ ಒಟ್ಟು 22.95 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇರುವುದಾಗಿ ಹೇಳಿದ್ದಾರೆ.
ಇನ್ನು ಅಪರ್ಣಾ ಬಳಿ 1.88 ಕೋಟಿ ರೂ ಮೊತ್ತದ ಚಿನ್ನಾಭರಣಗಳಿದ್ದು, ಪತಿ ಪ್ರತೀಕ್ ಯಾದವ್ ಮೂರು ವಿಮಾ ಪಾಲಿಸಿಗಳಲ್ಲಿ ಒಟ್ಟು 7.96 ಲಕ್ಷ ರೂಪಾಯಿಗಳನ್ನು ತೊಡಗಿಸಿದ್ದಾರೆ, ತಮ್ಮ ಬಳಿ ಒಟ್ಟು 3.27 ಕೋಟಿ ಚರಾಸ್ತಿ ಹಾಗೂ 12.5 ಲಕ್ಷ ಸ್ಥಿರಾಸ್ತಿ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಧಾನಸಭಾ ಚುನಾವಣೆಉತ್ತರ ಪ್ರದೇಶSPಎಸ್ ಪಿAparna Yadavಅಪರ್ಣಾ ಯಾದವ್Uttar Pradesh elections-2017richest candidateಶ್ರೀಮಂತ ಅಭ್ಯರ್ಥಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


