ಒಡಿಶಾದಲ್ಲಿ ನೆಲಬಾಂಬ್ ಸ್ಫೋಟ, ಐವರು ಪೊಲೀಸರ ಸಾವು
ಒಡಿಶಾದ ಕೋರಪುಟ್ ಜಿಲ್ಲೆಯ ಸುಂಕಿಯಲ್ಲಿ ಶಂಕಿತ ನಕ್ಸಲರು ಬುಧವಾರ ನೆಲಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು...

Published On :
ಕೋರಪುಟ್: ಒಡಿಶಾದ ಕೋರಪುಟ್ ಜಿಲ್ಲೆಯ ಸುಂಕಿಯಲ್ಲಿ ಶಂಕಿತ ನಕ್ಸಲರು ಬುಧವಾರ ನೆಲಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಪೊಲೀಸರ ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸ್ಫೋಟದಲ್ಲಿ ಹಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಒಡಿಶಾ ಸರ್ಕಾರ ಇನ್ನು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಇಂದು ಸಂಜೆ 5.20ರ ಸುಮಾರಿಗೆ ಒಡಿಶಾ ರಾಜ್ಯ ಶಸಸ್ತ್ರ ಪೊಲೀಸ್ ಪಡೆಯ 70 ಸಿಬ್ಬಂದಿಯನ್ನು ಅಂಗುಲ್ ಪೊಲೀಸ್ ತರಬೇತಿ ಕಾಲೇಜ್ ಗೆ ಕರೆದೊಯ್ಯುತ್ತಿದ್ದ ಮಿನಿ ಬಸ್ ಅನ್ನು ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


