ಬಟಿಂಡಾ ಸ್ಫೋಟ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
ಪಂಜಾಬ್ ನ ಬಟಿಂಡಾ ಜಿಲ್ಲೆಯ ಮೌರ್ ಮಂಡಿಯಲ್ಲಿ ಮಂಗಳವಾರ ಸಂಭವಿಸಿದ್ದ ಪ್ರಬಲ ಕಾರ್ ಬಾಂಬ್ ಸ್ಫೋಟದಲ್ಲಿ ಗಂಭೀರಾವಾಗಿ...

Published On :
ಬಟಿಂಡಾ: ಪಂಜಾಬ್ ನ ಬಟಿಂಡಾ ಜಿಲ್ಲೆಯ ಮೌರ್ ಮಂಡಿಯಲ್ಲಿ ಮಂಗಳವಾರ ಸಂಭವಿಸಿದ್ದ ಪ್ರಬಲ ಕಾರ್ ಬಾಂಬ್ ಸ್ಫೋಟದಲ್ಲಿ ಗಂಭೀರಾವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಹರ್ಮಿಂದರ್ ಜಸ್ಸಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು ಮತ್ತು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ಮೌರ್ ಮಂಡಿ ಹಾಗೂ ಬಟಿಂಡಾದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿವಾದಿತ ಗುರು ದೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರ ಆಪ್ತ ಸಂಬಂಧಿಯಾಗಿರುವ ಜಸ್ಸಿ ಅವರ ಸಮಾವೇಶದ ಬಳಿ ಈ ದುರ್ಘಟನೆ ಸಂಭವಿಸಿತ್ತು.
ಘಟನಾ ಸ್ಥಳಕ್ಕೆ ಇಂದು ವಿಧಿವಿಜ್ಞಾನ ತಜ್ಞರು ಭೇಟಿ ನೀಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bathinda blastTwo injured children diedeath toll rises to fiveಬಟಿಂಡಾ ಸ್ಫೋಟಇಬ್ಬರು ಮಕ್ಕಳು ಸಾವುಸಾವಿನ ಸಂಖ್ಯೆ 5ಕ್ಕೆ ಏರಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


