ಚುನಾವಣೆಗೆ ಸ್ಪರ್ಧಿಸುವ ಪಕ್ಷಗಳು, ಅಭ್ಯರ್ಥಿಗಳಿಗೆ ಚಾಲ್ತಿ ಖಾತೆ ತೆರೆಯಲು ಚುನಾವಣಾ ಆಯೋಗ ಸಲಹೆ
ಎಟಿಎಂಗಳಿಂದ ವಿತ್ ಡ್ರಾ ಮಿತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತೆಗೆದುಹಾಕಿದ ನಂತರ ಎಲ್ಲಾ...

Published On :
ನವದೆಹಲಿ: ಎಟಿಎಂಗಳಿಂದ ವಿತ್ ಡ್ರಾ ಮಿತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತೆಗೆದುಹಾಕಿದ ನಂತರ ಎಲ್ಲಾ ರಾಜಕೀಯ ಪಕ್ಷಗಳಿಗೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸಲಹೆಗಳನ್ನು ಹೊರಡಿಸಿರುವ ಚುನಾವಣಾ ಆಯೋಗ ಚಾಲ್ತಿ ಖಾತೆಯನ್ನು ತೆರೆಯುವಂತೆ ಹೇಳಿದೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎಟಿಎಂಗಳಿಂದ ಹಣ ಹಿಂಪಡೆಯುವ ಮಿತಿಯನ್ನು ಹೆಚ್ಚಿಸಬೇಕೆಂದು ಚುನಾವಣಾ ಸಮೀಕ್ಷಾ ತಂಡ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ವಿತ್ ಡ್ರಾ ಮಿತಿಯನ್ನು ಆರ್ ಬಿಐ ತೆಗೆದುಹಾಕಿದೆ.
ಇದಕ್ಕೂ ಮುನ್ನ ಚುನಾವಣಾ ಆಯೋಗ ಅಭ್ಯರ್ಥಿಗಳು ಬ್ಯಾಂಕಿನಲ್ಲಿ ಖಾತೆ ತೆರೆಯುವಂತೆ ಹೇಳಿತ್ತು. ಇದೀಗ ಎಲ್ಲಾ ಖಾತೆಗಳಲ್ಲಿನ ವಿತ್ ಡ್ರಾ ಮಿತಿಯನ್ನು ಆರ್ ಬಿಐ ಹಿಂತೆಗೆದುಕೊಂಡಿರುವುದರಿಂದ ಅಭ್ಯರ್ಥಿಗಳಿಗೆ ಸಹಾಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚುನಾವಣಾ ಆಯೋಗRBIಆರ್ ಬಿಐcandidatepolitical partyಅಭ್ಯರ್ಥಿಗಳುelection comissionರಾಜಕೀಯ ಪಕ್ಷCurrent accountಚಾಲ್ತಿ ಖಾತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


