ಬಜೆಟ್ ಮಂಡನೆ ಮಾಡುವ ಮೂಲಕ ಕೇಂದ್ರ ಇ.ಅಹ್ಮದ್'ರಿಗೆ ಅಗೌರವ ತೋರಿದೆ: ಕೇರಳ ಸಿಎಂ
ಕೇಂದ್ರ ಮಾಜಿ ಸಚಿವ ಇ. ಅಹಮದ್ ನಿಧನದ ಸುದ್ದಿ ತಿಳಿದಿದ್ದರೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಈ ಮೂಲಕ ಇ. ಅಹಮದ್ ಅವರಿಗೆ ಕೇಂದ್ರ ಅಗೌರವವನ್ನು ತೋರಿಸಿದೆ ಎಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್...

ತಿರುವನಂತಪುರ: ಕೇಂದ್ರ ಮಾಜಿ ಸಚಿವ ಇ. ಅಹಮದ್ ನಿಧನದ ಸುದ್ದಿ ತಿಳಿದಿದ್ದರೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಈ ಮೂಲಕ ಇ. ಅಹಮದ್ ಅವರಿಗೆ ಕೇಂದ್ರ ಅಗೌರವವನ್ನು ತೋರಿಸಿದೆ ಎಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ನಿನ್ನೆಯಷ್ಟೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಸಂಸತ್ತಿನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದುರು. ಈ ವೇಳೆ ಅಹಮದ್ ಅವರು ಕುಸಿದು ಬಿದ್ದಿದ್ದರು. ಅವರ ಸಾವಿನ ಸುದ್ದಿ ತಿಳಿದ ನಂತರವೂ ಕೇಂದ್ರ ಇಂದು ಬಜೆಜ್ ಮಂಡನೆ ಮಾಡಿರುವುದು ಸರಿಯಾದುದಲ್ಲ ಹಾಗೂ ಇದೊಂದು ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.
ನಿಧನ ಸುದ್ದಿ ತಿಳಿದ ಬಳಿಕವೂ ಕೇಂದ್ರ ಬಜೆಟ್ ಮಂಡನೆ ಮಾಡಿರುವುದು ಜನರ ಮನಸ್ಸಿಗೆ ಹಾಗೂ ಭಾವನೆಗಳಿಗೆ ನೋವುಂಟು ಮಾಡಿದಂತಾಗಿದೆ. ಕೇಂದ್ರ ಬಜೆಟ್ ಮಂಡನೆ ಮಾಡುವ ಮೂಲಕ ಇ. ಅಹಮದ್ ಅವರಿಗೆ ಆಗೌರವವನ್ನು ತೋರಿದೆ. ಹಿರಿಯ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಬದಲು ಕೇಂದ್ರ ಬಜೆಟ್ ಮಂಡನೆ ಮಾಡುವ ಮೂಲಕ ದೊಡ್ಡ ತಪ್ಪನ್ನು ಮಾಡಿದೆ.
ಅಹಮದ್ ಅವರು ಸಂಸತ್ತಿನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ನಾಯಕರಾಗಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲೂ ಸಾಕಷ್ಟು ಹೆಸರು ಮಾಡಿದ್ದರು. ದೇಶದ ಪ್ರತಿನಿಧಯಾಗಿ ವಿಶ್ವಸಂಸ್ಥೆಯಲ್ಲಿ ದೇಶ ಹಿತಾಸಕ್ತಿಗಳನ್ನು ಎತ್ತಿಹಿಡಿದ ವ್ಯಕ್ತಿಯಾಗಿದ್ದರು. ಇಂತಹ ವ್ಯಕ್ತಿಗೆ ಕೇಂದ್ರ ಆಗೌರವವನ್ನು ಸೂಚಿಸಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


