ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ, ಆಪ್ ಗೆ ಪ್ರತಿಪಕ್ಷ ಸ್ಥಾನ: ಸಮೀಕ್ಷೆ
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದ್ದು, ಆಮ್ ಆದ್ಮಿ ಪಕ್ಷಕ್ಕೆ ಬಹುಮತ ದೊರೆಯಲಿದೆ ಎಂದು ಇಂಡಿಯಾ ಟು ಡೆ ನಡೆಸಿರುವ ಸಮೀಕ್ಷೆ ಹೇಳಿದೆ.

Published On :
ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದ್ದು, ಆಮ್ ಆದ್ಮಿ ಪಕ್ಷಕ್ಕೆ ಬಹುಮತ ದೊರೆಯಲಿದೆ ಎಂದು ಇಂಡಿಯಾ ಟು ಡೆ ನಡೆಸಿರುವ ಸಮೀಕ್ಷೆ ಹೇಳಿದೆ.
ಎಕ್ಸಿಸ್ ಎಪಿಎಂ ಹಾಗೂ ಇಂಡಿಯಾ ಟುಡೆ ಸಮೂಹ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ಪಂಜಾಬ್ ನಲ್ಲಿ ಕಾಂಗ್ರೆಸ್ ಗೆ 60-65 ಸ್ಥಾನ ಗಳಿಸಲಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷ 41-44 ಸ್ಥಾನಗಳನ್ನು ಪಡೆಯಲಿದೆ.
ಆಡಳಿತಾರೂಢ ಶಿರೋಮಣಿ ಅಕಾಲಿ ದಳ(ಎಸ್ಎಡಿ)-ಬಿಜೆಪಿ ಮೈತ್ರಿ ಕೂಟ ಕೇವಲ 11-15 ಸ್ಥಾನ ಗಳಿಸಲಿದ್ದು 0-2 ಸ್ಥಾನಗಳನ್ನು ಇತರರ ಪಾಲಾಗಲುವ ಸಾಧ್ಯತೆ ಇದೆ. ಬಹುಮತ ಗಳಿಸುವ ಸಾಧ್ಯತೆ ಇರುವ ಕಾಂಗ್ರೆಸ್ ಪಕ್ಷ ಶೇ.37 ರಷ್ಟು ಮತಗಳನ್ನು ಪಡೆದರೆ, ಆಮ್ ಆದ್ಮಿ ಪಕ್ಷ ಶೇ.34 ರಷ್ಟು ಮತಗಳನ್ನು ಪಡೆಯಲಿದೆ, ಎಸ್ಎಡಿ-ಬಿಜೆಪಿಗೆ ಶೇ.25 ರಷ್ಟು ಮತಗಳು ದೊರೆಯಲಿದೆ ಎಂದು ಸಮೀಕ್ಷೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pre-poll surveyಚುನಾವಣಾ ಪೂರ್ವ ಸಮೀಕ್ಷೆಪಂಜಾಬ್ ಚುನಾವಣೆ-2017Punjab elections-2017India Today TVಇಂಡಿಯಾ ಟುಡೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


