ದೇಶ

ಯುಪಿಎ ಅಧಿಕಾರಾವಧಿಯಲ್ಲಿಯೂ ಹಿಂಸಾಚಾರಗಳು ನಡೆದಿದ್ದವು, ಆಗೇಕೆ ಯಾರೂ ಪ್ರಶ್ನಿಸಲಿಲ್ಲ?: ಅಮಿತ್ ಶಾ

ಕೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದಲೂ ಹತ್ಯೆ ಪ್ರಕರಣಗಳು ಹೆಚ್ಚಾಗಿವೆ ಎಂಬ ಟೀಕೆಗಳ ವಿರುದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ...

ಯುಪಿಎ ಅಧಿಕಾರಾವಧಿಯಲ್ಲಿಯೂ ಹಿಂಸಾಚಾರಗಳು ನಡೆದಿದ್ದವು, ಆಗೇಕೆ ಯಾರೂ ಪ್ರಶ್ನಿಸಲಿಲ್ಲ?: ಅಮಿತ್ ಶಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
Published On :
ಪಣಜಿ: ಕೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದಲೂ ಹತ್ಯೆ ಪ್ರಕರಣಗಳು ಹೆಚ್ಚಾಗಿವೆ ಎಂಬ ಟೀಕೆಗಳ ವಿರುದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹತ್ಯೆ ಕುರಿತಂತೆ ಪಣಜಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಯುಪಿಎ ಅಧಿಕಾರಾವಧಿಯಲ್ಲಿಯೂ ಹಿಂಸಾಚಾರಗಳು ನಡೆಸಿದ್ದೆವು. ಆಗೇಕೆ ಯಾರೊಬ್ಬರು ಪ್ರಶ್ನೆ ಎತ್ತಲಿಲ್ಲ. ಕೇವಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರವನ್ನು ಮಾತ್ರ ಟೀಕೆ ಮಾಡುತ್ತಿರುವುದು ಸರಿಯಲ್ಲ. ದೇಶದಲ್ಲಿ ಯಾವುದೇ ರೀತಿಯ ಆತಂಕದ ವಾತಾವರಣ ನಿರ್ಮಾಣವಾಗಿಲ್ಲ ಎಂದು ಹೇಳಿದ್ದಾರೆ. 
ಭಾರತದಲ್ಲಿ ಅತೀ ಹೆಚ್ಚಿ ಹಿಂಸಾಚಾರಗಳು ನಡೆದಿದ್ದು 2011-13ರ ಅವಧಿಯಲ್ಲಿ. ಆಗ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ. ಆಗೇಕೆ ಈ ರೀತಿಯ ಪ್ರಶ್ನೆಗಳಾವುದೂ ಕೇಳಿ ಬಂದಿರಲಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿಕೆ ನೀಡಿದ್ದರೂ, ಸರ್ಕಾರ ಮಾತ್ರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೇ ಘಟನೆ ನಡೆದರೂ, ಪ್ರಕರಣ ಸಂಬಂಧ ಯಾರೊಬ್ಬರನ್ನೂ ಬಂಧನಕ್ಕೊಳಪಡಿಸಿಲ್ಲ ಎಂಬುದು ಯಾವುದೇ ಪ್ರಕರಣಗಳಲ್ಲಾದರೂ ಕಂಡು ಬಂದಿವೆಯೇ? ಎಂದು ಕೇಳಿದ್ದಾರೆ. 
ಉತ್ತರಪ್ರದೇಶದಲ್ಲಿ ಮೊಹಮ್ಮದ್ ಅಖ್ಲಾಕ್ ರನ್ನು ಹತ್ಯೆ ಮಾಡಲಾಗಿತ್ತು. ಆಗ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದಿದ್ದು ಸಮಾಜವಾದಿ ಪಕ್ಷ. ಹತ್ಯೆಯ ಜವಾಬ್ದಾರಿ ಅಧಿಕಾರದಲ್ಲಿದ್ದ ಸರ್ಕಾರದ ಜವಾಬ್ದಾರಿಯಾಗಿತ್ತು. ಆದರೂ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಏನಿದು ಫ್ಯಾನ್? ನಾನು ನಾಗರಿಕರನ್ನು ಅರ್ಥ ಮಾಡಿಕೊಳ್ಳುತ್ತೇನೆ. ಆದರೆ, ಪತ್ರಕರ್ತರೇಕೆ ಈ ರೀತಿ ವರ್ತಿಸುತ್ತಿದ್ದಾರೆಂದು ಕಿಡಿಕಾರಿದ್ದಾರೆ. 
ಹತ್ಯೆ ಪ್ರಕರಣ ಸಂಬಂಧ ಕಾನೂನು ಕ್ರಮ ಎದುರಿಸಲೇಬೇಕಾಗುತ್ತದೆ. ಪ್ರಕರಣಗಳ ಸಂಬಂಧ ಸಂಬಂಧಪಟ್ಟಂತಹ ರಾಜ್ಯ ಸರ್ಕಾರಗಳು ಕ್ರಮಕೈಗೊಳ್ಳುತ್ತವೆ. ಗೋವಾ ರಾಜ್ಯದಲ್ಲಿ ಗೋಮಾಂಸ ನಿಷೇಧವನ್ನು ವಿರೋಧಿಸಲಾಗುತ್ತಿದೆ. ಆದರೆ, ಈ ನಿಷೇಧ ತಂದಿದ್ದು ಬಿಜೆಪಿ ಸರ್ಕಾರವಲ್ಲ. ವರ್ಷಗಳ ಹಿಂದೆಯೇ ಗೋವಾದಲ್ಲಿ ಗೋಮಾಂಸಕ್ಕೆ ನಿಷೇಧ ಹೇರಲಾಗಿತ್ತು ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.