ದೇಶ

ಜಾರ್ಖಾಂಡ್ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣ: ಬಿಜೆಪಿ ನಾಯಕನ ಬಂಧನ

ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಜಾರ್ಖಾಂಡ್ ರಾಜ್ಯದಲ್ಲಿ ನಡೆದ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ನಾಯಕ ಸೇರಿದಂತೆ ಇಬ್ಬರು ಆರೋಪಿಗಳನ್ನುಪೊಲೀಸರು ಭಾನುವಾರ...

ಜಾರ್ಖಾಂಡ್ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣ: ಬಿಜೆಪಿ ನಾಯಕನ ಬಂಧನ
ಸಾಂದರ್ಭಿಕ ಚಿತ್ರ
Published On :
ರಾಮಗಢ (ಜಾರ್ಖಾಂಡ್): ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಜಾರ್ಖಾಂಡ್ ರಾಜ್ಯದಲ್ಲಿ ನಡೆದ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ನಾಯಕ ಸೇರಿದಂತೆ ಇಬ್ಬರು ಆರೋಪಿಗಳನ್ನುಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 
ನಿತ್ಯಾನಂದ್ ಮಹೋತೊ ಬಂಧಿತ ಬಿಜೆಪಿ ನಾಯಕ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಆರೋಗಿಯನ್ನು ಸಂತೋಷ್ ಸಿಂಗ್ ಎಂದು ಗುರ್ತಿಸಲಾಗಿಲಿದೆ. 
ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯಾಗಿರುವ ಛೋಟು ರಾಣಾ ಎಂಬ ಆರೋಪಿ ರಾಮಗಢ್ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆಂದು ಪೊಲೀಸ್ ಅಧೀಕ್ಷಕ ಕಿಶೋರ್ ಕೌಶಲ್ ಅವರು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಜಾರ್ಖಾಂಡ್ ನ ರಾಮಗಢ್ ಜಿಲ್ಲೆಯಲ್ಲಿ ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಅಲಿಮುದ್ದೀನ್ ಅಕಾ ಅಸ್ಗರ್ ಅಲಿ ಎಂಬ ಮುಸ್ಲಿಂ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.
ಇದಕ್ಕೂ ಮುನ್ನ ಗೋಹತ್ಯೆ ಮಾಡಿದ್ದಾನೆಂಬ ಸಂಶಯದ ಮೇರೆಗೆ 200 ಮಂದಿ ಗೋರಕ್ಷಕರ ತಂಡ ಗಿರಿದಿ ಜಿಲ್ಲೆಯ ಬರಿಯಾಬಾದ್ ಗ್ರಾಮದ ಉಸ್ಮಾನ್ ಅನ್ಸಾರಿ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿತ್ತು. ಅಲ್ಲದೆ, ಅವರ ಮನೆಗೆ ಬೆಂಕಿ ಹಚ್ಚಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.